ಕೇರಳದಲ್ಲಿ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೇರಳ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ.
ಕೇರಳದ ಇಡುಕಿ ಜಲಾಶಯದಲ್ಲಿ ನೀರಿನ ಮಟ್ಟ 2396.90 ಅಡಿಯಿದ್ದು ಜನರ ಸುರಕ್ಷತೆಗಾಗಿ ಜಿಲ್ಲಾಡಳಿತವು ಆರೆಂಜ್ ಅಲರ್ಟ್ ಅನ್ನು ಘೋಷಿಸಿದೆ. ಶಬರಿಗಿರಿ ಯೋಜನೆಯ ಭಾಗಿಯಾಗಿರುವ ಕಕ್ಕಿ ಆಣೆಕಟ್ಟಿನ ಶಟರ್ ಗಳನ್ನು ತೆರೆಯಲಾಗಿದ್ದು, ಪಂಪ ನದಿಯ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆ ಇದೆ. ಶಬರಿಮಲೆ ಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ನೀರು ಬಿಡುವ ನಿರ್ಧಾರವು ಬೇಸರದ ಸಂಗತಿಯಾಗಿದೆ. ಈ ಭಾರೀ ಕೇರಳದಲ್ಲಿ ಧಾರಾಕಾರ ಮಳೆಯಿಂದಾಗಿ ಜನರ ಜನಜೀವನ ಅಸ್ತವ್ಯಸ್ತಗೊಂಡಿದೆ. ಅತಿಯಾದ ಮಳೆಯ ಕಾರಣ ಅನೇಕ ಕಡೆ ಭೂಕುಸಿತದಿಂದ ಅನೇಕರು ಸಾವಿಗೀಡಾಗಿದ್ದಾರೆ.
ಇಂತಹ ಸಂದರ್ಭದಲ್ಲಿ ನಿಮ್ಮ ರಕ್ಷಣೆಗಾಗಿ ನಾವಿದ್ದೇವೆ ಎಂದು ಮಾನ್ಯ ಪ್ರಧಾನ ಮಂತ್ರಿ,ಹಾಗೂ ಗೃಹ ಸಚಿವರು ತಮ್ಮ ಕಳಕಳಿಯನ್ನ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಪಡಿಸಿದ್ದರು.
ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೇರಳದ ಮುಖ್ಯಮಂತ್ರಿ ಜೊತೆ ,ಭೂ ಕುಸಿತ ಮತ್ತು ಮಳೆ ವಿಚಾರದ ಬಗ್ಗೆ ಮಾತು ಕತೆ ನಡೆಸಿದ್ದೇನೆ, ಸಂಬಂಧ ಪಟ್ಟ ರಕ್ಷಣಾ ಇಲಾಖೆಯು ಕಾರ್ಯಚರಣೆ ನಡೆಸುತ್ತಿದೆ. ಆರೋಗ್ಯ ಇಲಾಖೆಯು ಗಾಯಾಳುಗಳಿಗೆ ಚಿಕಿತ್ಸೆ ಕಾರ್ಯವನ್ನು ಮಾಡುತ್ತಿದೆ. ಎಲ್ಲರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆಂದು ಮಾನ್ಯ ಪ್ರಧಾನಿ ಮೋದಿಯವರು ತಮ್ಮ ಅಭಿಪ್ರಾಯಗಳನ್ನು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಹಾಗೆ ಕೇಂದ್ರ ಗೃಹಸಚಿವ ಅಮಿತ್ ಶಾ ರವರು ಭಾರೀ ಮಳೆ ಹಾಗೂ ನೆರೆ ಉಂಟಾಗಿರುವ ಕೇರಳದ ಪರಿಸ್ಥಿತಿಯ ಬಗ್ಗೆ ನಾವು ನಿರಂತರವಾಗಿ ಪರಿಶೀಲನೆ ನಡೆಸಿದ್ದೇವೆ, ಜನರಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ಮಾಡಲು ಕೇಂದ್ರ ಸರ್ಕಾರವು ಸಿದ್ಧವಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಸಲು ಎನ್ ಡಿಆರ್ ಎಫ್ ತಂಡವನ್ನು ಕಳುಹಿಸಲಾಗಿದೆ. ಜನರ ಸುರಕ್ಷತೆಗಾಗಿ ಪ್ರಾರ್ಥಿಸುತ್ತಿದ್ದೇನೆ ಎಂದು ಪ್ರವಾಹ ಪೀಡಿತರಿಗೆ ಧೈರ್ಯತುಂಬುವ ನುಡಿಗಳನ್ನ ಟ್ವೀಟ್ ಮೂಲಕ ತಿಳಿಸಿದ್ದಾರೆ.