ಕಲೆ, ಸಾಹಿತ್ಯ, ಸಂಸ್ಕೃತಿಗೆ ಹೆಸರುವಾಸಿಯಾದ ಶಿವಮೊಗ್ಗ ಜಿಲ್ಲೆ ಈಗ ವಿಜ್ಞಾನ ರಂಗದಲ್ಲೂ ಪ್ರಪಂಚ ಗಮನಿಸುವ ಸಾಧನೆ ಮಾಡುತ್ತಿದೆ. ಇತ್ತೀಚೆಗಷ್ಟೇ ಜಗತ್ತಿನ ಶ್ರೇಷ್ಠ ಶೇ.2 ವಿಜ್ಞಾನಿಗಳ ಪಟ್ಟಿಯನ್ನ ಅಮೆರಿಕದ ಪ್ರತಿಷ್ಠಿತ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದೆ.
ಅದರಲ್ಲಿ ಕುವೆಂಪು ವಿಶ್ವವಿದ್ಯಾಲಯದ ಪ್ರತಿಭಾವಂತರಾದ ಡಾ.ಬಿ.ಇ. ಕುಮಾರಸ್ವಾಮಿ ಮತ್ತು ಡಾ.ಬಿ.ಜೆ. ಗಿರೀಶ್ ಅವರು ವಿಜ್ಞಾನಿಗಳ ಸ್ಥಾನ ಪಡೆದಿದ್ದಾರೆ.
ಈ ಸಂತೋಷವನ್ನು ಹಂಚಿಕೊಳ್ಳಲು ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಅವರನ್ನು ಪುರಸ್ಕರಿಸಲಾಯಿತು.
ಈ ಸಮಾರಂಭದಲ್ಲಿ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ, ಪರೀಕ್ಷಾಂಗ ಕುಲಸಚಿವ ಪ್ರೊ. ಸಿ. ಎಂ. ತ್ಯಾಗರಾಜ, ಸಿಂಡಿಕೇಟ್ ಸದಸ್ಯರುಗಳಾದ ಜಿ.ಧರ್ಮಪ್ರಸಾದ್, ಬಳ್ಳೇಕೆರೆ ಸಂತೋಷ್, ಪ್ರೊ. ಕಿರಣ್ ದೇಸಾಯಿ, ರಾಮಲಿಂಗಪ್ಪ.ಹೆಚ್, ಬಿ.ನಿರಂಜನ್ ಮೂರ್ತಿ, ಎನ್.ಆರ್ ಮಂಜುನಾಥ್, ಎಸ್.ಆರ್. ನಾಗರಾಜ್ ಮತ್ತಿತರು ಉಪಸ್ಥಿತರಿದ್ದರು.