ಕೋವಿಡ್, ಲಾಕ್ ಡೌನ್ ನಂತರ ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳು ಸೇರಿ ಎಲ್ಲ ಶಾಲಾ-ಕಾಲೇಜುಗಳು ಪ್ರಾರಂಭಗೊಂಡಿವೆ. ಶಾಲೆಗಳಲ್ಲಿ ಮಕ್ಕಳ ದಾಖಲಾತಿ 2.35 ಲಕ್ಷದ ದಾಟಿದೆ ಎನ್ನಲಾಗುತ್ತಿದೆ. ಆದರೆ ಮೂಲಸೌಕರ್ಯ ಕೊರತೆಯಿಂದ ಸರ್ಕಾರಿ ಶಾಲೆಗಳು ಬಳಲುತ್ತಿವೆ.
ನಿರ್ವಹಣೆ ಕೊರತೆಯಿಂದ ಸರಕಾರಿ ಶಾಲೆಗಳು ಶಿಥಿಲಗೊಂಡಿವೆ. ಈ ಸಂಬಂಧ 13 ಮಾನದಂಡಗಳನ್ನು ಅನುಸರಿಸಿ, ಶಾಲೆಗಳಲ್ಲಿರುವ ಕೊರತೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಖಾಸಗಿ ಕಂಪನಿಗಳ ಸಿಎಸ್ಆರ್ ನಿಧಿ, ಸ್ವಯಂ ಸೇವಾ ಸಂಸ್ಥೆ, ಹಳೆ ವಿದ್ಯಾರ್ಥಿ ಸಂಘಗಳ ನೆರವಿನಿಂದ ಈ ಶಾಲೆಗಳ ರಿಪೇರಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರಾರ್ಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ಲಾಕ್ ಡೌನ್ ಸಂದರ್ಭದಲ್ಲಿ ಶಾಲೆಗಳು ಮುಚ್ಚಿದ್ದ ಕಾರಣ ನಿರ್ವಹಣೆ ಮಾಡಲಾಗದೇ, ಹಾಗೂ ಮಳೆಯಿಂದಾಗಿ ಹಲವೆಡೆ ಕಟ್ಟಡಗಳು ಕುಸಿದಿವೆ. ರಾಜ್ಯಾದ್ಯಂತ 7,800 ಶಾಲಾ ಕಟ್ಟಡಗಳು ಹಾನಿಗೊಳಗಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಲೆಗಳಲ್ಲಿರುವ ಮೂಲಸೌಕರ್ಯ ಮತ್ತು ಸ್ಥಿತಿಗತಿಗಳ ಬಗ್ಗೆ ಶಿಕ್ಷಣ ಇಲಾಖೆ ಮಾಹಿತಿ ಸಂಗ್ರಹಿಸಿದೆ. ಮೂರು ಸಾವಿರಕ್ಕೂ ಹೆಚ್ಚು ಶಾಲಾ ಕಟ್ಟಡಗಳು ತೀವ್ರವಾಗಿ ಹಾನಿಗೊಳಗಾಗಿದ್ದು ನಾಲ್ಕು ಸಾವಿರಕ್ಕೂ ಹೆಚ್ಚು ಕಟ್ಟಡಗಳು ಮಧ್ಯಮ ಪ್ರಮಾಣದ ಹಾನಿಗೊಳಗಾಗಿವೆ ಇದರಲ್ಲಿ ಗ್ರಾಮೀಣ ಮತ್ತು ಪ್ರಾರ್ಥಮಿಕ ಶಾಲೆಗಳೇ ಹೆಚ್ಚು ಎಂಬ ವಿಚಾರಗಳು ಬೆಳಕಿಗೆ ಬಂದಿವೆ. ಸೂಕ್ತ ಕ್ರಮವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಲಾಕ್ ಡೌನ್ ಅವಧಿ : ಶಾಲಾ ಕಟ್ಟಡ ನಿರ್ವಹಣಾ ಕೊರತೆ
Date: