66ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದ 2021 ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹಲವು ಕ್ಷೇತ್ರಗಳ ಸಾಧನೆಗಾಗಿ 66 ಜನ ಸಾಧಕರಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದರು.
ರಾಜ್ಯೋತ್ಸವ ಪ್ರಶಸ್ತಿಗೆ ಆಹ್ವಾನಿಸುವ ಸಂಪ್ರದಾಯ ಸರಿಯಲ್ಲ. ಕ್ಷೇತ್ರದ ತಜ್ಞರೇ ಮುಂದಿನ ವರ್ಷದಿಂದ ಸಾಧಕರನ್ನು ಶೋಧಿಸಲಿದ್ದಾರೆ ಎಂದರು.ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆ ಕನಿಷ್ಠ ವಯೋಮಿತಿ 60 ವರ್ಷ ತುಂಬಿರ ಬೇಕೆಂಬ ನಿಯಮವನ್ನು ಮುಂದಿನ ವರ್ಷದಿಂದ ಸಡಿಲಿಸುವ ಜೊತೆಗೆ, ಪ್ರಶಸ್ತಿ ಮೊತ್ತವನ್ನು 1 ಲಕ್ಷ ದಿಂದ 5 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.
ಈ ಸಮಾರಂಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಹಿರಿಯ ಸಾಹಿತಿ ಪದ್ಮಶ್ರೀ ಡಾ. ದೊಡ್ಡರಂಗೇಗೌಡ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.