“ಹೈಕಮಾಂಡ್ ನಿಂದ ನನಗೆ ಬುಲಾವ್ ಬಂದಿಲ್ಲ. ರಾಷ್ಟ್ರೀಯ ಕಾರ್ಯಕಾರಿಣಿಗೆ ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಳ್ಳುವೆ ” ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ತಮ್ಮ ನೇತೃತ್ವದ ರಾಜ್ಯ ಸರ್ಕಾರ ನೂರು ದಿನಗಳ ಆಡಳಿತ ಪೂರೈಸಿರುವುದು ದೊಡ್ಡ ಮೈಲಿಗಳು ಅಲ್ಲದಿದ್ದರೂ ಮುಂದಿನ ದಿನಗಳಲ್ಲಿ ಜನಪರ ನಡೆ ಹೇಗಿರಲಿದೆ ಎಂಬುದರ ದಿಕ್ಸೂಚಿಯಾಗಿದೆ ಎಂದು ಅವರು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂರು ದಿನಗಳಲ್ಲಿ ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನ ಹೆಚ್ಚಳ, ಅಮೃತ ಯೋಜನೆ ಸೇರಿದಂತೆ ಹಲವು ಯೋಜನೆಗಳು ಜಾರಿಯಾಗಿವೆ. ಆರ್ಥಿಕ ವ್ಯವಸ್ಥೆ ಚೇತರಿಸಿಕೊಳ್ಳುತ್ತಿದ್ದು, ಮುಂದೆ ಮತ್ತಷ್ಟು ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದರು.
ವ್ಯವಸ್ಥೆಯ ಸುಧಾರಣೆಯ ಜೊತೆಗೆ, ಜನರ ಬಳಿಯೇ ಸರ್ಕಾರ ಹಾಗೂ ಯೋಚನೆಗಳು ಹೋಗಬೇಕಿವೆ. ಆರ್ಥಿಕ ಬೆಳವಣಿಗೆಗೆ ಮಾನವ ಸಂಪನ್ಮೂಲವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕಿದೆ. ಪರಿಶಿಷ್ಟರು ಹಿಂದುಳಿದ ವರ್ಗದವರು ಬಡವರು ಹಾಗೂ ಮಹಿಳೆಯರನ್ನು ತಲಾ ಆದಾಯ ಏರಿಕೆಗಾಗಿ ಒಳಪಡಿಸಿಕೊಳ್ಳಬೇಕು. ಅದಕ್ಕಾಗಿ ಆರ್ಥಿಕ ನೆರವು ನೀಡುವ ವಿಶೇಷ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ನೂರು ದಿನ ನೂರಾರು ತಲ್ಲಣ
Date: