ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದಾಗಿ ಕಂಗೆಟ್ಟಿದ್ದ ಜನಸಾಮಾನ್ಯರಿಗೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ದರ ಇಳಿಕೆ ಮಾಡಿದ್ದು ಜನರು ಸ್ವಲ್ಪಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಸಾಮಾನ್ಯ ಕುಟುಂಬಗಳಿಗೆ ನುಂಗಲಾಗದ ತುತ್ತಾಗಿ ಪರಿಣಮಿಸಿರುವ ಅಡುಗೆ ಅನಿಲ ದರವನ್ನು ಕೂಡ ಇಳಿಸಬೇಕು ಎಂಬ ಬೇಡಿಕೆ ಬಲವಾಗಿ ಕೇಳಿಬರುತ್ತಿದೆ.
ಗೃಹ ಬಳಕೆ ಸಿಲಿಂಡರ್ ಗಳ ದರ ಕೆಲವು ತಿಂಗಳಲ್ಲಿ ದುಬಾರಿಯಾಗಿದ್ದು ಶ್ರೀಸಾಮಾನ್ಯರಿಗೆ ಹೊರೆಯಾಗಿದೆ. ಹೀಗಾಗಿ ರಾಜಕೀಯ ನಾಯಕರು ಮತ್ತು ಜನಸಾಮಾನ್ಯರು ಅಡುಗೆ ಅನಿಲದ ಬೆಲೆ ಕಡಿಮೆ ಮಾಡುವಂತೆ ಒತ್ತಾಯಿಸಿದ್ದಾರೆ.
ವಾಹನ ಸವಾರರ ಗಿಂತ ಹೆಚ್ಚಾಗಿ ಸರ್ಕಾರ ಇನ್ನೊಂದು ಅಂಶವನ್ನು ಪ್ರಮುಖವಾಗಿ ಗಮನಿಸಬೇಕಾಗಿದೆ. ಗೃಹಬಳಕೆಯ ಸಿಲಿಂಡರ್ ಬಳಕೆ ಕೂಡ ಗಗನಕ್ಕೇರಿದೆ. ಮಧ್ಯಮ ಹಾಗೂ ಕೆಳಮಧ್ಯಮ ವರ್ಗದವರಿಗೆ ಸಿಲಿಂಡರ್ ಬೆಲೆ ಕೈಗೆಟುಕದಂತಾಗಿದೆ. ಕೇಂದ್ರ ಸರ್ಕಾರ ತಕ್ಷಣ ಗಮನ ಹರಿಸಿ ಗೃಹ ಬಳಕೆ ಸಿಲಿಂಡರ್ ಬೆಲೆಯನ್ನು ಕೂಡಲೇ ತಗ್ಗಿಸುವಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಆಸೆಗಣ್ಣಿನಿಂದ ಜನ ನೋಡುತ್ತಿದ್ದಾರೆ.