ರಾಜ್ಯದಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿದೆ. ಬೆಳಗಾವಿ ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿ ಸಣ್ಣದಾಗಿ ಮಳೆಯ ಸಿಂಚನ ಇದೆ. ಇದನ್ನು ಹೊರತುಪಡಿಸಿದರೆ, ಮಳೆ ಬ್ರೇಕ್ ನೀಡಿದೆ. ರಾಜ್ಯದಲ್ಲಿಂದು ಒಣ ಹವೆ ವಾತಾವರಣ ಇರಲಿದೆ.
ಆದರೆ, ಅನೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಜೊತೆಗೆ ಕೊಂಚ ಸೆಕೆ ಇರಲಿದೆ. ಜೂನ್ ಮತ್ತು ಜುಲೈನಲ್ಲಿ ಸುರಿದ ಮಳೆಯಿಂದಾಗಿ ರಾಜ್ಯದ ಜಲಾಶಯಗಳು, ಕೆರೆ ಕುಂಟೆಗಳು ಭರ್ತಿಯಾಗಿವೆ. ಮತ್ತೊಂದೆಡೆ ನೆರೆಯ ಮಹಾರಾಷ್ಟ್ರದಲ್ಲಿನ ಮಳೆಯಿಂದಾಗಿ ಕೃಷ್ಣಾ ಮತ್ತು ಭೀಮಾ ನದಿ ಉಕ್ಕಿ ಹರಿಯುತ್ತಿವೆ.
ರಾಜಧಾನಿ ಬೆಂಗಳೂರಿನಲ್ಲಿ 10 ಗಂಟೆ ನಂತರ ಸೂರ್ಯನ ಪ್ರಖರತೆ ಹೆಚ್ಚಾಗಲಿದೆ. ನಗರದಲ್ಲಿ ಸಂಜೆ ಆಗ್ತಿದ್ದಂತೆ ಸುಳಿಗಾಳಿ ಹೆಚ್ಚಾಗುತ್ತಿರುವ ಕಾರಣ ಚಳಿಯ ಪ್ರಮಾಣ ಕೊಂಚ ಏರಿಕೆಯಾಗಿದೆ. ಇಂದು ನಗರದಲ್ಲಿ ಗರಿಷ್ಠ 28 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.