ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನೊಂದಾಯಿತ ಕಟ್ಟಡ ಕಾರ್ಮಿಕರಾದ ಬಾರ್‍ಬೆಂಡಿಂಗ್, ಪೈಂಟಿಂಗ್, ಪ್ಲಂಬಿಂಗ್, ಕಾರ್ಪೆಂಟರ್, ಎಲೆಕ್ಟ್ರೀಷಿಯನ್, ಮೆಷನ್ ವೃತ್ತಿಯವರಿಗೆ ಕಿಟ್‍ಗಳನ್ನು ಒದಗಿಸಲಾಗುತ್ತಿದ್ದು, ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ನೋಂದಣಿ ಗುರುತಿನ ಚೀಟಿ, ಫಲಾನುಭವಿಯ ಆಧಾರ್ ಕಾರ್ಡ್ ಪ್ರತಿಯೊಂದಿಗೆ ದಿ:25/08/2022 ರೊಳಗಾಗಿ ತಾಲೂಕು ಮಟ್ಟದಲ್ಲಿ ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು, ಜಿಲ್ಲಾ ಮಟ್ಟದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.
ಸಹಾಯಧನ ಪಡೆಯಲು ಅರ್ಜಿ ಆಹ್ವಾನ
2022-23 ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ತಿಜೋರಿ/ಬ್ಯಾಂಕಿಂಗ್ ಕೌಂಟರ್ ನಿರ್ಮಾಣಕ್ಕಾಗಿ ಸಹಾಯಧನ ಹಾಗೂ ವಿವಿಧ ಸಹಕಾರ ಸಂಘಗಳಿಗೆ ಷೇರು ಬಂಡವಾಳ ಯೋಜನೆಗಳಡಿ ಅರ್ಹ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು http://shimoga.nic.in ಪೋರ್ಟಲ್ ಮೂಲಕ ಅಥವಾ ನೇರವಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ, ಸಹಕಾರ ಭವನದ ಮೊದಲನೇಯ ಮಹಡಿ, ಶಿವಮೊಗ್ಗ, ಇಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಂದಿಗೆ ದಿ: 09-09-2022 ರೊಳಗಾಗಿ ಸಲ್ಲಿಸುವಂತೆ ಸಹಕಾರ ಸಂಘಗಳ ಉಪ ನಿಬಂಧಿಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ:08182-222711 ನ್ನು ಸಂಪರ್ಕಿಸುವುದು.
ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್‍ನವರು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.
ಆಸಕ್ತರು ದಿನಾಂಕ: 29.08.2022 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂ.ಸಂ. 0821-2515944 ಸಂಪರ್ಕಿಸಬಹುದೆಂದು ಕರಾಮುವಿ ಪ್ರಭಾರ ಕುಲಸಚಿವರಾದ ಡಾ. ಎ. ಖಾದರ್ ಪಾಷ ತಿಳಿಸಿದ್ದಾರೆ.