ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ನವದೆಹಲಿಯಲ್ಲಿ ಸಮಾಲೋಚನೆ ನಡೆಸಿದರು.
ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಕುಮಾರಸ್ವಾಮಿ, ‘ಜನತಾ ಪರಿವಾರ ಒಗ್ಗೂಡುವ ಬಗ್ಗೆ ಮಾತುಕತೆ ನಡೆಯಿತು.
ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಎಲ್ಲರೂ ಒಗ್ಗೂಡುವ ಅವಶ್ಯಕತೆ ಇದೆ’ ಎಂದರು.
‘ಬಿಹಾರದಲ್ಲಿ ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳ ನಂತರ ಮತ್ತೆ ಈ ಚರ್ಚೆಗೆ ಚಾಲನೆ ಸಿಕ್ಕಿದೆ. ಜೆ.ಪಿ. ಅವರಿಂದ ಪ್ರಾರಂಭವಾದ ಜನತಾ ಪರಿವಾರ ಮತ್ತೆ ಒಂದುಗೂಡಬೇಕಿದೆ. ಈಗ ದೇಶದಲ್ಲಿ ಬಲವಾದ ವಿರೋಧ ಪಕ್ಷದ ಅವಶ್ಯಕತೆ ಇದೆ’ ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು, ಬಿಹಾರದಲ್ಲಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಂತರ ಈ ಭೇಟಿ ನಿರ್ಣಾಯಕವಾಗಿದೆ ಎಂದು ಹೇಳಿದರು. ಇದು ದೇಶದ ರಾಜಕೀಯ ಮತ್ತು ಪ್ರಜಾಪ್ರಭುತ್ವಕ್ಕೆ ಒಳ್ಳೆಯದು ಎಂದು ಅವರು ಹೇಳಿದರು.