ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 09 ರಂದು ಮೆರವಣಿಗೆ ಮೂಲಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಿದ್ದು ಸಾರ್ವಜನಿಕ ಹಿತದೃಷ್ಟಿ ಹಾಗೂ ವಾಹನಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೆಳಕಂಡಂತೆ ವಾಹನಗಳ ಸುಗಮ ಸಂಚಾರ, ನಿಲುಗಡೆ ಮತ್ತು ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ.ಆರ್ ಆದೇಶಿಸಿದ್ದಾರೆ.
ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್‍ಪಿಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಟಿ ಪಾರ್ಕ್, ಗಾಂಧಿ ಬಜಾರ್ ಮುಖ್ಯರಸ್ತೆ, ಎಸ್‍ಎನ್ ಸರ್ಕಲ್, ಬಿ.ಹೆಚ್.ರಸ್ತೆ, ಎ.ಎ.ಸರ್ಕಲ್, ನೆಹರು ರಸ್ತೆ ಮುಖಾಂತರ, ಗೋಪಿ ಸರ್ಕಲ್, ದುರ್ಗಿಗುಡಿ ಮುಖ್ಯರಸ್ತೆ, ಜೈಲ್ ಸರ್ಕಲ್, ಕುವೆಂಪು ರಸ್ತೆ ಮಾರ್ಗವಾಗಿ, ಶಿವಮೂರ್ತಿ ಸರ್ಕಲ್, ಸವಳಂಗ ಮುಖ್ಯರಸ್ತೆ, ಮಹಾವೀರ ಸರ್ಕಲ್, ಡಿವಿಎಸ್ ಸರ್ಕಲ್, ಕಾನ್ವೆಂಟ್ ರಸ್ತೆ, ಬಿ.ಹೆಚ್.ರಸ್ತೆ, ಪೊಲೀಸ್ ಕಾರ್ನರ್, ಕೋಟೆ ಪೊಲೀಸ್ ಠಾಣೆ ರಸ್ತೆ, ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದಿಂದ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಗುವುದು.
• ಈ ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಅಡಿ ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆ ನಿಷೇಧಿಸಲಾಗಿದೆ.
• ಭದ್ರಾವತಿ, ಬೆಂಗಳೂರು ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ, ಎಲ್ಲಾ ಬಸ್‍ಗಳು ಮತ್ತು ಸಿಟಿ ಬಸ್‍ಗಳು ಹಾಗೂ ಕಾರು ವಾಹನಗಳು ಎಂಆರ್‍ಎಸ್ ಸರ್ಕಲ್, ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
• ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್‍ಗಳು ಹೊಳೆಹೊನ್ನೂರು ಸರ್ಕಲ್, ಎಂಆರ್‍ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
• ಹೊನ್ನಾಳಿ, ಹರಿಹರ, ದಾವಣಗೆರೆಯಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್‍ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್, ಹೊಳೆಹೊನ್ನೂರು ಕ್ರಾಸ್, ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರವಾಗಿ ಹೋಗುವುದು.
• ಕೋಟೆ ರಸ್ತೆ ಮತ್ತು ಓಲ್ಡ್ ಬಾರ್‍ಲೈನ್ ರಸ್ತೆಯ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು.
• ಕೆಎಸ್‍ಆರ್‍ಟಿಸಿ ಮತ್ತು ಖಾಸಗಿ ಬಸ್‍ನಿಲ್ದಾಣದಿಂದ ಶಿಕಾರಿಪುರ, ಸೊರಬ ಕಡೆ ಹೋಗುವ ಎಲ್ಲಾ ಬಸ್‍ಗಳು ಮತ್ತು ಭಾರೀ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್-ಆಲ್ಕೊಳ ಸರ್ಕಲ್-ಪೊಲೀಸ್ ಚೌಕಿ-ರಾಜ್‍ಕುಮಾರ್ ಸರ್ಕಲ್, ಬೊಮ್ಮನಕಟ್ಟೆ ಮುಖಾಂತರ ಸವಳಂಗ ರಸ್ತೆಗೆ ಹೋಗುವುದು.
• ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆಯ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗುವುದು.
• ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.