ವಿದ್ಯಾರ್ಥಿಗಳಿಗೆ ಕೇವಲ ಜ್ಞಾನವಷ್ಟೇ ಇದ್ದರೆ ಸಾಲದು, ಬದಲಾಗಿ ಆ ಜ್ಞಾನವನ್ನು ಕಾರ್ಯರೂಪಕ್ಕೆ ತರುವುದರಿಂದ ಬದುಕಿನಲ್ಲಿ ಯಶಸ್ಸನ್ನು ಕಾಣಬಹುದು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾದ ಎನ್ ಗೋಪಿನಾಥ್ ಅವರು ತಿಳಿಸಿದರು.
ಸೈಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಾಂಸ್ಕೃತಿಕ ಮತ್ತು ನಿರ್ವಹಣಾ ಉತ್ಸವದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಇಚ್ಛಾ ಶಕ್ತಿ ಬಹು ಮುಖ್ಯ. ಈ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ನಿರ್ವಹಣಾ ಉತ್ಸವವು ಜೀವನವನ್ನು ರೂಪಿಸಲು ಸಹಾಯಕವಾಗಲಿದೆ ಎಂದರು.
ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಾಲೇಜಿನಲ್ಲಿ ಆಚರಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು ಕಾರ್ಯಕ್ಕೆ ಮುಂದಾಗಿರುವುದು ಸಂತಸ ವಿಚಾರ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ, ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಚಾರ್ಯರಾದ ಪ್ರೋ.ಎಂ.ಕೆ. ವೀಣಾ ಅವರು ಮಾತನಾಡಿ, ವಿದ್ಯಾರ್ಥಿಗಳು ಈಗಾಗಲೇ ವಿವಿಧ ಕಡೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿ, ಕ್ರೀಡೆಗಳಲ್ಲಿ ಜಯಗಳಿಸಿ ಕಾಲಿನ ಕೀರ್ತಿಪತಾಕೆಯನ್ನು ಎಲ್ಲೆಡೆ ಹಾರಿಸಿದ್ದಾರೆ. ಇಂದು ನಿಮ್ಮ ವಿವಿಧ ಪಠ್ಯೇತರ ಚಟುವಟಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾಲೇಜಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇಲ್ಲಿಯೂ ಭಾಗವಹಿಸಿ ನಿಮ್ಮ ಪ್ರತಿಭೆಯನ್ನ ಅನಾವರಣಗೊಳಿಸಲು ಇದೊಂದು ಸೂಕ್ತ ವೇದಿಕೆಯಾಗಿದೆ ಎಂದರು.
ಕಾರ್ಯಕ್ರಮವನ್ನು ಸುಶ್ಮಿತಾ ಹಾಗೂ ಪ್ರಶಾಂತ್ ನಿರೂಪಿಸಿದರು. ಸುಚಿತ್ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಪ್ರಿಯಾಂಕ ಸ್ವಾಗತವನ್ನು ಕೋರಿದರು. ಪ್ರಜ್ವಲ್ ಹೆಚ್. ಇವರು ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಐ. ಕ್ಯೂ.ಎ.ಸಿ ಸಂಚಾಲಕರಾದ ಪ್ರೊ. ಕೆ.ಎಸ್.ಸರಳಾ, ಸಾಂಸ್ಕೃತಿಕ ಸಂಚಾಲಕರಾದ ಡಾ. ಗಿರಿಧರ್ ಕೆ.ವಿ., ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ಡಾ. ಶಿವಮೂರ್ತಿ ಎ, ಹಾಗೂ ಕಾಲೇಜಿನ ಅಧ್ಯಾಪಕ ಅಧ್ಯಾಪಕೇತರ ವರ್ಗ, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.