ತೀವ್ರ ಧರ್ಮದಂಗಲ್ಗೆ ಕಾರಣವಾಗಿದ್ದ ಹಿಜಾಬ್ ವಿವಾದದ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ಅಂತ್ಯಗೊಂಡಿದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಸುಪ್ರೀಂ ಕೋರ್ಟ್ನಲ್ಲಿ ಹಿಜಾಬ್ ವಿಚಾರಣೆ ಅಂತ್ಯವಾಗಿದ್ದು ಕೋರ್ಟ್ ತೀರ್ಪು ಕಾಯ್ದಿರಿಸಿದೆ. ಸುಮಾರು 10 ದಿನಗಳ ಕಾಲ ಅರ್ಜಿ ವಿಚಾರಣೆ ನಡೆಸಿ, ಅರ್ಜಿದಾರರ ಪರ ವಕೀಲರು ಮತ್ತು ಸರ್ಕಾರ ಪರ ವಕೀಲರ ವಾದ-ಪ್ರತಿವಾದ ಆಲಿಸಿರುವ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಹಿಜಾಬ್ ನಿಷೇಧ ಸರಿಯೇ ಅಥವಾ ತಪ್ಪೇ ಎಂಬ ತನ್ನ ಆದೇಶವನ್ನು ಕಾಯ್ದಿರಿಸಿದೆ.
ಹಿಜಾಬ್ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್ ಪೀಠ
ಉಡುಪಿಯ ಸರ್ಕಾರಿ ಕಾಲೇಜಿನಿಂದ ಶುರುವಾಗಿದ್ದ ಹಿಜಾಬ್ ವಿವಾದ ಇಡೀ ರಾಜ್ಯಾದ್ಯಂತ ಪಸರಿಸಿತ್ತು.
ಹಿಜಾಬ್ಗೆ ಪ್ರತಿಯಾಗಿ ಕೆಲ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿದ್ದರಿಂದ ವಿವಾದ ಮತ್ತಷ್ಟು ಭುಗಿಲೆದ್ದಿತ್ತು. ಬಳಿಕ ರಾಜ್ಯ ಸರ್ಕಾರ ಹಿಜಬ್ ನಿಷೇಧ ಆದೇಶ ಹೊರಡಿಸಿತ್ತು. ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದವು.
ಹಿಜಾಬ್ ಪರ ವಕೀಲರು ಮತ್ತು ಸರ್ಕಾರದ ಪರ ವಕೀಲರ ವಾದ ಮಂಡನೆ ಆಲಿಸಿರುವ ಹೇಮಂತ್ ಗುಪ್ತಾ ನೇತೃತ್ವದ ದ್ವಿಸದಸ್ಯ ಪೀಠ ತೀರ್ಪು ಕಾಯ್ದಿರಿಸಿದೆ.