ವೃತ್ತಿ ಪರ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಕುರಿತಂತೆ ಉಂಟಾಗಿದ್ದ ಬಿಕ್ಕಟ್ಟು ಸದ್ಯಕ್ಕೆ ಬಗೆಹರಿದಿದೆ. ಸಿಇಟಿ ರ್ಯಾಂಕಿಂಗ್ ವಾದಕ್ಕೆ ಸಂಬಂಧ ಸರ್ಕಾರ ಏಕಸದಸ್ಯಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಇತ್ಯರ್ಥ ಪಡಿಸಿದೆ. ಇದರಿಂದಾಗಿ ಚಾತಕಪಕ್ಷಿಗಳಂತೆ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಸ್ವಲ್ಪ ಮಟ್ಟಿನ ನೆಮ್ಮದಿ ದೊರಕಲಿದೆ.
ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನ ಉಪಾಧ್ಯಕ್ಷ ಪ್ರೊ.ಬಿ. ತಿಮ್ಮೇಗೌಡ ಅಧ್ಯಕ್ಷತೆಯ ಸಮಿತಿ ಸೂಚಿಸಿರುವ ವಿಧಾನ ಅಳವಡಿಸಕೊಂಡು ಸಿಇಟಿ ರ್ಯಾಂಕಿಂಗ್ ಪಟ್ಟಿ ಪ್ರಕಟಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.
ಸಮಿತಿ ಸೂಚಿಸಿರುವ ವಿಧಾನಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳ ಪರ ವಕೀಲರೂ ಸಮ್ಮತಿಸಿದ ಹಿನ್ನೆಲೆಯಲ್ಲಿ, ಸಮಿತಿ ಸೂಚಿಸಿರುವ ವಿಧಾನ ಅಳವಡಿಸಿಕೊಂಡು, ಹೊಸ ರ್ಯಾಂಕಿಂಗ್ ಪಟ್ಟಿ ಪ್ರಕಟಿಸುವಂತೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್ ಮೇಲ್ಮನವಿ ಇತ್ಯರ್ಥಪಡಿಸಿದೆ.