ರಾಜ್ಯದಲ್ಲಿ ಚರ್ಮ ಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟರೆ 20 ಸಾವಿರ ರೂಪಾಯಿಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗಕ್ಕೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಹಾವೇರಿ ಭಾಗದಲ್ಲಿ ಜಾನುವಾರುಗಳಲ್ಲಿ ಚರ್ಮ ಗಂಟು ರೋಗ ಕಂಡುಬಂದಿದೆ. ಗಂಟು ರೋಗ ಹರಡದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಅದಕ್ಕೆ ಈಗಾಗಲೇ ಸೂಚನೆ ನೀಡಿ ವಿಶೇಷ ತಂಡವನ್ನು ಕಳಿಸಲಾಗುವುದು.
ರಾಜ್ಯದಲ್ಲಿ ಈಗಾಗಲೇ ಹಾವೇರಿ, ಗದಗ, ಕರಾವಳಿ, ದೊಡ್ಡಬಳ್ಳಾಪುರ , ಹಾವೇರಿ, ಕೋಲಾರ, ಬೆಂಗಳೂರು ಗ್ರಾಮಾಂತರ,ಬೆಳಗಾವಿ, ತುಮಕೂರು, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಾಸುಗಳಲ್ಲಿ ಚರ್ಮ ಗಂಟು ರೋಗ ಕಾಣಿಸಿಕೊಂಡಿದೆ.
ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು,ದುಡಿಯುವ ವರ್ಗಕ್ಕೆ ಹೆಚ್ಚಿನ ಮಹತ್ವ ನೀಡಿದ್ದೇವೆ. 11,137 ಪೌರ ಕಾರ್ಮಿಕರ ಸೇವೆಯನ್ನು ಕರ್ನಾಟಕ ಇತಿಹಾಸದಲ್ಲಿ ಪ್ರಥಮ ಬಾರಿಗೆ ಕಾಯಂಗೊಳಿಸಲಾಗಿದೆ. ಇನ್ನೆರಡು ಹಂತಗಳಲ್ಲಿ ಖಾಯಂ ಮಾಡುವ ಕೆಲಸವನ್ನು ಮಾಡಲಾಗುವುದು. ಅಂಗನವಾಡಿ, ಆಶಾ ಕಾರ್ಯಕರ್ತರಗೆ ಕೆಲಸಕ್ಕೆ ಸುರಕ್ಷತೆ, ಭದ್ರತೆ ನೀಡುವ ಕೆಲಸಗಳ ಬಗ್ಗೆ ನಿರ್ಧಾರಗಳನ್ನು ಕೈಗೊಳ್ಳಲಾಗುವುದು. ದುಡಿಮೆಗೆ ಗೌರವ ಬರುವ ರೀತಿಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.