Wednesday, November 27, 2024
Wednesday, November 27, 2024

ಹಸುವನ್ನ ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಲು ಸುಪ್ರೀಂ ನಕಾರ

Date:

ಹಸುವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದೆ.

ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಅಭಯ್ ಎಸ್ ಓಕಾ ಅವರ ಪೀಠವು ಈ ಸಮಸ್ಯೆಯಿಂದ ಯಾವ ಮೂಲಭೂತ ಹಕ್ಕಿಗೆ ಧಕ್ಕೆಯಾಗಿದೆ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ.

ಈ ಅರ್ಜಿಯ ವಿಚಾರಣೆ ನಡೆಸುವುದು ನ್ಯಾಯಾಲಯದ ಕೆಲಸವೇ? ನೀವು ಏಕೆ ಇಂತಹ ಅರ್ಜಿಗಳನ್ನು ಸಲ್ಲಿಸುತ್ತೀರಿ? ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.
ಹಸು ರಾಷ್ಟ್ರೀಯ ಪ್ರಾಣಿ ಆಗದೇ ಇರುವುದು ಯಾರ ಮತ್ತು ಯಾವ ಮೂಲಭೂತ ಹಕ್ಕನ್ನು ಉಲ್ಲಂಘಿಸಿದೆ? ಎಂದು ಸಹ ಕೋರ್ಟ್ ಪ್ರಶ್ನಿಸಿದೆ.

ನೀವು ನ್ಯಾಯಾಲಯಕ್ಕೆ ಬಂದ ಕಾರಣ ನಾವು ಕಾನೂನನ್ನು ಗಾಳಿಗೆ ತೂರಬೇಕೇ? ಎಂದು ಸುಪ್ರೀಂಕೋರ್ಟ್ ಅರ್ಜಿದಾರರನ್ನು ಪ್ರಶ್ನಿಸಿದೆ.

ಗೋವಂಶ್ ಸೇವಾ ಸದನ್ ಮತ್ತು ಇತರರು ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದರು.

ಸದ್ಯ ಅರ್ಜಿದಾರರು ಹಸುವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕು ಎಂಬ ಅರ್ಜಿಯನ್ನು ಹಿಂತೆಗೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Constitution Day ಸಂವಿಧಾನ ಪೀಠಿಕೆಯನ್ನು ಪ್ರತಿಷ್ಠಾಪಿಸುವ ಕೆಲಸವನ್ನ ರಾಜ್ಯ ಸರ್ಕಾರ ಮಾಡುತ್ತಿದೆ- ಮಧು ಬಂಗಾರಪ್ಪ

Constitution Day ಭಾರತೀಯರೆಲ್ಲರೂ ಒಂದೇ ಎಂಬ ಐಕ್ಯತೆ, ಸಮಗ್ರತೆ, ಭಾವೈಕ್ಯತೆ...

K.H. Muniyappa ನ.28ರೊಳಗೆ ಎಲ್ಲಾ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ವಿತರಿಸಲು ಅಧಿಕಾರಿಗಳಿಗೆ ಸೂಚನೆ- ಸಚಿವ ಕೆ ಎಚ್. ಮುನಿಯಪ್ಪ

K.H. Muniyappa ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಗಳ ಆದೇಶದಂತೆ...