ರಾಜ್ಯದಲ್ಲಿ ಶಿಕ್ಷಣ ಕಾಯ್ದೆ ಪ್ರಕಾರ ಯಾವುದೇ ಧಾರ್ಮಿಕ ಆಚರಣೆಗಳಿಗೆ ಅವಕಾಶ ಇರುವುದಿಲ್ಲ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿ ಹೊರಡಿಸಿರುವ ಆದೇಶ ಮುಂದುವರಿಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.
ಜಗತ್ತಿನಲ್ಲಿ ಮಹಿಳಾ ಸ್ವಾತಂತ್ರ್ಯದ ಬಗ್ಗೆ ಹೆಚ್ಚು ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಒಳ್ಳೆಯ ತೀರ್ಪು ನಿರೀಕ್ಷೆ ಮಾಡಿದ್ದೆವು. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿದ್ದಾರೆ. ಅಲ್ಲದೇ, ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದಿಂದ ಅಂತಿಮ ತೀರ್ಪು ಬರುವವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ. ಆದುದರಿಂದ, ರಾಜ್ಯದಲ್ಲಿ ಶಿಕ್ಷಣ ಕಾಯ್ದೆ ಪ್ರಕಾರ ಯಾವುದೇ ಧಾರ್ಮಿಕ ಆಚರಣೆಗಳಿಗೆ ಅವಕಾಶ ಇರುವುದಿಲ್ಲ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿ ಹೊರಡಿಸಿರುವ ಆದೇಶ ಮುಂದುವರಿಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.