Wednesday, November 27, 2024
Wednesday, November 27, 2024

Chikmagalur ರಾಜ್ಯದಲ್ಲೇ ಚಿಕ್ಕಮಗಳೂರು ಜಿಲ್ಲಾ ಕಸಾಪ ಅತಿ ಹೆಚ್ಚು ದತ್ತಿ ಕಾರ್ಯಕ್ರಮ ನಡೆಸುತ್ತಿದೆ

Date:

Chikmagalur ಚಿಕ್ಕಮಗಳೂರು, ಜಿಲ್ಲಾ ಮಟ್ಟದಲ್ಲಿ ಅತಿಹೆಚ್ಚು ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜನೆ ಮಾಡುವ ಮೂಲಕ ಕರ್ನಾಟಕದಲ್ಲಿ ಮೊದಲ ಸ್ಥಾನವನ್ನು ಜಿಲ್ಲಾ ಕಸಾಪವು ಪಡೆದುಕೊಂಡು ಕನ್ನಡದ ಕಂಪನ್ನು ಎಲ್ಲೆಡೆ ಹರಡಿಸುವ ಕಾಯಕದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ ಎಂದು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಗಿರಿಧರ್ ಯತೀಶ್ ಹೇಳಿದರು.

ಚಿಕ್ಕಮಗಳೂರು ನಗರದ ಡಿ.ಎಸ್.ಎಂ.ಎಸ್. ಕಚೇರಿಯ ಆವರಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಏರ್ಪ ಡಿಸಲಾಗಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಶನಿವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕಸಾಪ ವತಿಯಿಂದ ಜಿಲ್ಲೆಯ ವಿವಿದ ಭಾಗಗಳಲ್ಲಿ ಮಹಿಳಾ ಹಾಗೂ ಜನಪದ ಸಮ್ಮೇಳನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ ಆಯೋಜನೆ ಮಾಡಬೇಕು ಎಂದು ಸಲಹೆ ಮಾಡಿದರು.

‘ಜನಪದ ಸಾಹಿತ್ಯದಲ್ಲಿ ಮಹಿಳೆ’ ವಿಷಯ ಕುರಿತು ಸಾಹಿತಿ ಡಾ. ಹೆಚ್.ಎಸ್.ಸತ್ಯನಾರಾಯಣ ಮಾತನಾಡಿ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಮೊದಲ ಬಾರಿಗೆ ಮಾಸ್ತಿ ಅವರು ಪ್ರಾರಂಭಿಸಿ ನಾಡಿನೆಲ್ಲೆಡೆ ಪಸರಿಸಿದವರು. ಅವರ ಅನನ್ಯ ಸೇವೆಯಿಂದ ಇಂದು ದತ್ತಿ ಕಾರ್ಯಕ್ರಮವು ಯಶಸ್ವಿಯಾಗಿ ಎಲ್ಲೆಡೆ ಹರಿದಾಡುತ್ತಿದೆ ಎಂದು ತಿಳಿಸಿದರು.
ಜನಪದ ಗೀತೆಗಳಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಮಹಿಳೆಯು ಜನಪದ ಕೇಂದ್ರದ ಶಕ್ತಿಯಾಗಿ ದ್ದಾಳೆ. ಜನಪದ ಗೀತೆಗಳೆಂದರೆ ದೈನಂದಿನ ಚಟುವಟಿಕೆಗಳಲ್ಲಿ ಕಂಡಿರುವ ದೃಶ್ಯಗಳನ್ನು ಗೀತೆಗಳ ಮೂಲಕ ಅಂದಿನ ಕಾಲದವರು ಹೊರಹೊಮ್ಮಿಸಿದ್ದಾರೆ ಎಂದು ತಿಳಿಸಿದರು.

Chikmagalur ಹಿಂದಿನ ಕಾಲದಲ್ಲಿ ಜಂಗಮರು ಮನೆಗೆ ಆಗಮಿಸುತ್ತಿದ್ದ ದೃಶ್ಯಾವಳಿಗಳನ್ನು ಗಮನದಲ್ಲಿಟ್ಟುಕೊಂಡು ಮಹಿ ಳೆಯು ಗೀತೆಗಳ ಮೂಲಕ ಜನಪದ ಗೀತೆ ರಚನೆ ಮಾಡುತ್ತಿದ್ದರು. ಹಾಲುಂಡ ತವರಿಗೆ ಏನೆಂದು ಹಾಡಲಿ ಎಂಬ ಗೀತೆಯೊಂದಿಗೆ ಹಿರಿಯ ಜೀವಿಗಳು ಪದ ಕಟ್ಟುವ ಜೊತೆಗೆ ತಮ್ಮ ಕಾಯಕದ ಶ್ರಮವನ್ನು ಮರೆಯಲಿಕ್ಕೆ ಗೀತೆಗ ಳನ್ನು ತಾವಾಗಿಯೇ ರಚಿಸಿಕೊಂಡು ಹಾಡುತ್ತಿದ್ದರು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಯೋಜನೆ ಮಾಡುವ ಮೂಲಕ ಯಶಸ್ವಿ ಗೊಳಿಸಲಾಗಿದೆ. ಇಂತಹ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚುಚ್ಚು ಭಾಗವಹಿಸಿ ದತ್ತಿ ಉಪನ್ಯಾಸವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಡಿಎಸ್‌ಎಂಎಸ್ ಅಧ್ಯಕ್ಷ ಪ್ರಭು ಸೂರಿ, ಉಪಾಧ್ಯಕ್ಷ ಅಶೋಕ್, ನಿರ್ದೇಶಕ ಭಗವತಿ ಹರೀಶ್, ಜಿಲ್ಲಾ ಕಸಾಪ ಸಂಘಟನಾ ಕಾರ್ಯದರ್ಶಿ ಲೋಕೇಶ್, ಸಂಚಾಲಕ ಪರಮೇಶ್, ಪ್ರಧಾನ ಸಂಚಾಲಕ ಗುರುವೇಶ್, ಕಡೂರು ಅಧ್ಯಕ್ಷ ಸಿಂಗಟಗೆರೆ ಸಿದ್ದಪ್ಪ, ಬಲಿಜ ಸಂಘದ ತಾಲ್ಲೂಕು ಅಧ್ಯಕ್ಷ ದೇವರಾಜ್, ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವೀಣಾ ಮಲ್ಲಿಕಾರ್ಜುನ್ ನಿರೂಪಿಸಿದರು. ಕಸಾಪ ತಾಲ್ಲೂಕು ಅಧ್ಯಕ್ಷ ಬಿಸಲೇಹಳ್ಳಿ ಸೋಮಶೇಖರ್ ಸ್ವಾಗತಿಸಿದರು. ವೀರೇಶ್ ಕೌಲಗಿ ವಂದಿಸಿದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related