Sunday, November 24, 2024
Sunday, November 24, 2024

BJP Karnataka ಅಭಿವೃದ್ಧಿಯೇ ನಮ್ಮ ಗೆಲುವಿಗೆ ಕಾರಣ ಆಗಲಿದೆ-ಕೆ.ಬಿ.ಅಶೋಕ ನಾಯಕ್

Date:

BJP Karnataka ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಬಿಜೆಪಿಯೇ ಶಕ್ತಿ ಆಗಿದ್ದು, ಬಿಜೆಪಿ ಆಡಳಿತ ನಡೆಸಿದ ಅವಧಿಯಲ್ಲಿ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಕೋಟ್ಯಾಂತರ ರೂ. ಅನುದಾನ ನೀಡುವ ಮೂಲಕ ಅಭಿವೃದ್ಧಿ ಪಥದಲ್ಲಿ ಮುನ್ನಡೆದಿದೆ ಎಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ ಹೇಳಿದರು.

ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಸೈದರ ಕಲ್ಲಹಳ್ಳಿಯಿಂದ ಚುನಾವಣೆ ಪ್ರಚಾರ ಆರಂಭಿಸಿ ಮಾತನಾಡಿ, ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯವಿರುವ ಮೂಲಸೌಕರ್ಯ, ರಸ್ತೆ, ಸಮುದಾಯ ಭವನ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಕೋಟಿ ರೂ.ಗೂ ಅಧಿಕ ಅನುದಾನ ಒದಗಿಸಲಾಗಿದೆ.

BJP Karnataka ಅಭಿವೃದ್ಧಿಯೇ ನಮ್ಮ ಗೆಲುವಿಗೆ ಕಾರಣ ಆಗಲಿದೆ ಎಂದು ತಿಳಿಸಿದರು.
ಐದು ವರ್ಷಗಳ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿದ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಾವಿರಾರು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಹಳ್ಳಿ ಹಳ್ಳಿಗಳಲ್ಲೂ ಆಯೋಜಿಸುತ್ತಿರುವ ಸಭೆಗಳಲ್ಲಿ ಬೇರೆ ಪಕ್ಷಗಳ ಕಾರ್ಯಕರ್ತರು ಹಾಗೂ ಮುಖಂಡರು ಪಕ್ಷಕ್ಕೆ ಸೇರುತ್ತಿರುವುದು ಮತ್ತಷ್ಟು ಶಕ್ತಿ ಹೆಚ್ಚಿಸಲಿದೆ ಎಂದರು.

ಪ್ರತಿಯೊಂದು ಗ್ರಾಮಗಳಲ್ಲಿ ಆಗಿರುವ ಕೆಲಸಗಳ ಬಗ್ಗೆ ಪಕ್ಷದ ಕಾರ್ಯಕರ್ತರು ಮನೆ ಮನೆಗಳಿಗೂ ತಲುಪಿಸುವ ಮೂಲಕ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಬೇಕು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರವು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೆಚ್ಚಿನ ಕ್ಷೇತ್ರ ಆಗಿದ್ದು, ನೀರಾವರಿ ಯೋಜನೆ ಸೇರಿದಂತೆ ಎಲ್ಲ ಯೋಜನೆಗಳಿಗೂ ಹೆಚ್ಚಿನ ಅನುದಾನ ಒದಗಿಸಿದ್ದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಗೆಲುವು ಕೂಡ ಮುಖ್ಯ ಎಂದು ಹೇಳಿದರು.
ಕ್ಷೇತ್ರ, ಜಿಲ್ಲೆ, ರಾಜ್ಯ ಹಾಗೂ ದೇಶದ ಹಿತದೃಷ್ಠಿಯಿಂದ ಬಿಜೆಪಿ ಪಕ್ಷ ಅತ್ಯಂತ ಅಗತ್ಯವಾಗಿದ್ದು, ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತ ದೇಶ ಐತಿಹಾಸಿಕ ಹಾಗೂ ಮಹತ್ವದ ಹೆಜ್ಜೆಗಳನ್ನು ಇಡುತ್ತಿದ್ದು, ದೇಶ ಸದೃಢವಾಗಿ ರೂಪುಗೊಳ್ಳುತ್ತಿದೆ.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕೈಗೊಂಡ ಕ್ರಾಂತಿಕಾರಿ ನಿರ್ಣಯಗಳಿಂದ ಬಿಜೆಪಿ ಬಲ ಮತ್ತಷ್ಟು ಹೆಚ್ಚಿದೆ. 2023ರ ಚುನಾವಣೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಅತಿ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿ ಗೆಲ್ಲಿಸಬೇಕು ಎಂದು ತಿಳಿಸಿದರು.

ಸೈದರ ಕಲ್ಲಹಳ್ಳಿ ಗ್ರಾಮದಲ್ಲಿ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಪಕದ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು. ಮಂಡಲ ಅಧ್ಯಕ್ಷ ಮಂಜುನಾಥ ಕಲ್ಲಜ್ಜನಾಳ್, ವಿರೂಪಾಕ್ಷಪ್ಪ, ಸದಾಶಿವಪ್ಪ, ಜಗದೀಶ್ ಗೌಡ, ಮಲ್ಲೇಶ್, ಷಡಾಕ್ಷರಪ್ಪ, ಸುಬ್ರಹ್ಮಣ್ಯ ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯದಲ್ಲಿ ಪ್ರಮುಖರ ಸಭೆ ನಡೆಸಲಾಯಿತು. ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಪ್ರಧಾನ ಕಾರ್ಯದರ್ಶಿ ಗೋಪಾಲ್, ಉಜ್ಜಿನಪ್ಪ, ಮಲ್ಲೇಶ್, ರಂಗೋಜಿರಾವ್ ಸೇರಿದಂತೆ ಪ್ರಮುಖರು ಸಭೆ ನಡೆಸಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೈದರಕಲ್ಲಹಳ್ಳಿ, ದಿಗ್ಗೇನಹಳ್ಳಿ, ಆದ್ರಿಹಳ್ಳಿ, ಅರಸನಘಟ್ಟ ತಾಂಡಾ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದರು. ಗ್ರಾಮಾಂತರ ವ್ಯಾಪ್ತಿಯ ಕುರುಬರ ವಿಠಲಪುರ, ನಿಂಬೆಗೊಂದಿ, ವಡೇರಪುರ, ಆನವೇರಿ, ಇಟ್ಟಿಗೆಹಳ್ಳಿ, ಮಂಗೋಟೆ, ನಾಗಸಮುದ್ರ ಸೇರಿದಂತೆ ವಿವಿಧೆಡೆಗಳಲ್ಲಿ ಪ್ರವಾಸ ಹಮ್ಮಿಕೊಳ್ಳಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ

Maharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ...

Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ

Police Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ...

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ)...