RBI to pull out ₹2,000 notes from active circulation ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಜನರಿಗೆ ಒಂದು ಶಾಕ್ ನೀಡಿದೆ. ಇನ್ನು ಮುಂದೆ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಆರ್ ಬಿಐ ಘೋಷಿಸಿದೆ.
ಆರ್ ಬಿ ಐ ಜನರ ಬಳಿ ಇರುವ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಸೆಪ್ಟೆಂಬರ್ 30ರವರೆಗೆ ಕಾಲಾವಕಾಶ ನೀಡಿದೆ. ಒಂದು ದಿನಕ್ಕೆ 20 ಸಾವಿರ ರೂಪಾಯಿ ವಿನಿಮಯ ಮಾಡಿಕೊಳ್ಳಬಹುದು. ಮೇ 23 ರಿಂದ ನೋಟು ವಿನಿಮಯ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಜನರು ತಮ್ಮ ಹತ್ತಿರದ ಯಾವುದೇ ಬ್ಯಾಂಕ್ ಶಾಖೆ ಹಾಗೂ ಆರ್ ಬಿ ಐ ಪ್ರಾದೇಶಿಕ ಕಚೇರಿಗಳಿಗೆ ತೆರಳಿ 2ಸಾವಿರ ರೂಪಾಯಿ ನೋಟುಗಳನ್ನು ವಿನಿಮಯ ಮಾಡಿಕೊಳ್ಳಬಹುದು.
2000 ವಿನಿಮಯ ಮಾಡಿಕೊಳ್ಳಲು ಯಾವುದೇ ಶುಲ್ಕ ವಿಧಿಸುವಂತಿಲ್ಲ. ಒಂದು ವೇಳೆ ಬ್ಯಾಂಕ್ ಗಳು ಹಣ ಸ್ವೀಕರಿಸದೆ ಹೋದರೆ ನಾಗರಿಕರು ಅವರ ವಿರುದ್ಧ ದೂರನ್ನು ಸಲ್ಲಿಸಬಹುದು.
RBI to pull out ₹2,000 notes from active circulation 2000 ರೂ. ಚಲಾವಣೆಯ ನೋಟು ಆರ್ ಬಿಐ ಹಿಂಪಡೆದ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ... ಈಗ 2000 ಮೌಲ್ಯದ ನೋಟು ನಿಷೇಧಿಸಿದರೇ, 2016ರಲ್ಲಿ ಅದನ್ನು ಚಲಾವಣೆಗೆ ತಂದದ್ದು ಯಾಕೆ? ಯಾವ ಕಾರಣಕ್ಕಾಗಿ ಈಗ ಇದನ್ನು ನಿಷೇಧಿಸಲಾಗಿದೆ? ಕಪ್ಪು ಹಣವನ್ನು ನಿಯಂತ್ರಿಸುವ ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನ ಪ್ರಧಾನಿ ನರೇಂದ್ರ ಮೋದಿಯವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ