Saturday, November 23, 2024
Saturday, November 23, 2024

Block Women’s Congress ಯುವ ಮತದಾರರ ಒಲವಿನಿಂದ ಮಧು ಗೆದ್ದರು- ಅನಿತಾ ಮಧು ಬಂಗಾರಪ್ಪ

Date:

Block Women’s Congress ಸೊರಬ ಕ್ಷೇತ್ರದಲ್ಲಿ ಮಹಿಳಾ ಮತ್ತು ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರಿದ ಹಿನ್ನೆಲೆ ಮಧು ಬಂಗಾರಪ್ಪ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲು ಸಾಧ್ಯವಾಯಿತು. ಕ್ಷೇತ್ರದ ಮತದಾರರಿಗೆ ಅಭಿನಂದನೆಗಳನ್ನು ಸಲ್ಲಿಸಲು ಇಚ್ಛಿಸುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಪತ್ನಿ ಅನಿತಾ ಮಧು ಬಂಗಾರಪ್ಪ ಹೇಳಿದರು.

ಬುಧವಾರ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ಕಲ್ಯಾಣ ಮಂಟಪದಲ್ಲಿ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡ ಅಭಿನಂದನಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಚುನಾವಣೆಯ ಸಂದರ್ಭದಲ್ಲಿ ಕ್ಷೇತ್ರದ ಜನತೆ ಕೊಟ್ಟ ಮಾತಿನಂತೆ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಿದ್ದಾರೆ.

ಪ್ರಚಾರದ ವೇಳೆ ಜನತೆ ಅನೇಕ ಸಮಸ್ಯೆಗಳನ್ನು ಸಹ ತಮ್ಮ ಗಮನಕ್ಕೆ ತಂದಿದ್ದರು. ಅವುಗಳನ್ನು ಪತಿ ಮಧು ಬಂಗಾರಪ್ಪ ಅವರಿಗೆ ತಿಳಿಸಿ ಹಂತ-ಹಂತವಾಗಿ ಸಮಸ್ಯೆಗಳನ್ನು ಪರಿಹರಿಸಲು ಕೇಳಿಕೊಳ್ಳುತ್ತೇನೆ. ಪಕ್ಷವು ಸಹ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯ ಜವಾಬ್ದಾರಿಯನ್ನು ನೀಡಿದೆ.

Block Women’s Congress ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಮತ್ತು ಗುಣ ಮಟ್ಟದ ಶಿಕ್ಷಣ ಸರ್ಕಾರಿ ಶಾಲೆಯ ಮಕ್ಕಳಿಗೆ ದೊರೆಯಬೇಕು ಎಂಬ ಅಭಿಲಾಷೆಯನ್ನು ಮಧು ಬಂಗಾರಪ್ಪ ಅವರು ಹೊಂದಿದ್ದಾರೆ. ಕ್ಷೇತ್ರದ ಅಭಿವೃದ್ಧಿಯು ಸೇರಿದಂತೆ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವರು ಎಂದರು.

ಸರ್ಕಾರವು ಸಹ ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಕಾರ್ಡ್‌ನಲ್ಲಿನ ಅಂಶಗಳನ್ನು ಜಾರಿಗೆ ತರುತ್ತಿದೆ. ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವುದು ಮತ್ತು

ಆನವಟ್ಟಿ-ಸೊರಬ ಭಾಗದ ಯುವಜನತೆಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಉತ್ಸಾಹ ಹೊಂದಿದ್ದಾರೆ. ತಾವು ಸಹ ಮಧು ಬಂಗಾರಪ್ಪ ಅವರ ಜೊತೆಗಿದ್ದು, ಕ್ಷೇತ್ರದ ಜನತೆಯೊಂದಿಗೆ ಸದಾ ಇರುತ್ತೇನೆ ಮತ್ತು ಜನತೆಯ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೇನೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಜಾತಾ ಜೋತಾಡಿ ಮಾತನಾಡಿ, ಕ್ಷೇತ್ರದ ಮಹಿಳಾ ಮತದಾರರು ಒಗ್ಗಟ್ಟಿನಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಪ್ರಚಾರಕ್ಕೆ ಪಕ್ಷದ ಮುಖಂಡರು ಸಹಕಾರ ನೀಡಿದರು.

ಮುಖ್ಯವಾಗಿ ಮಾಜಿ ಸಿಎಂ ಎಸ್. ಬಂಗಾರಪ್ಪ ಅವರ ಪುತ್ರಿಯರಾದ ಸುಜಾತಾ ತಿಲಕ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಮತ್ತು ಮಧು ಬಂಗಾರಪ್ಪ ಅವರ ಪತ್ನಿ ಅನಿತಾ ಅವರು ಕೈ ಜೋಡಿಸಿದ್ದು ಪಕ್ಷಕ್ಕೆ ಆನೆ ಬಲ ಬಂದಂತಾಯಿತು. ಮಹಿಳಾ ಮತದಾರರನ್ನು ನಮ್ಮತ್ತ ಸೆಳೆಯಲು ಸಹಕಾರಿಯಾಗಿದ್ದು, ಇದರ ಪರಿಣಾಮ ಮಧು ಬಂಗಾರಪ್ಪ ಅವರು ಅತ್ಯಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು. ಜನತೆ ಸಾಕಷ್ಟು ನಿರೀಕ್ಷೆಯೊಂದಿಗೆ ಮತ ಚಲಾಯಿಸಿದ್ದಾರೆ. ಜನತೆಯ ನಿರೀಕ್ಷೆಗಳನ್ನು ಕ್ರಮೇಣವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಅನಿತಾ ಮಧು ಬಂಗಾರಪ್ಪ ಅವರನ್ನು ಅಭಿನಂದಿಸಲಾಯಿತು.

ಜಿಪಂ ಮಾಜಿ ಸದಸ್ಯೆ ರಾಜೇಶ್ವರಿ ಗಣಪತಿ, ತಾಪಂ ಮಾಜಿ ಸದಸ್ಯೆ ಜ್ಯೋತಿ ನಾರಾಯಣಪ್ಪ, ಪುರಸಭೆ ಸದಸ್ಯೆ ಪ್ರೇಮಾ, ಚಂದ್ರಗುತ್ತಿ ಗ್ರಾಪಂ ಅಧ್ಯಕ್ಷೆ ಶಿಲ್ಪಾ ಗಿರೀಶ್ ಗೌಡ, ಉಪಾಧ್ಯಕ್ಷೆ ಲಕ್ಷ್ಮೀ ಚಂದ್ರಪ್ಪ, ಸದಸ್ಯರಾದ ಸರಿತಾ, ಲಕ್ಷ್ಮೀ ರವಿ, ಶ್ರೀಮತಿ ಚಂದ್ರಕಾಂತ್, ಮಹಿಳಾ ಪ್ರಮುಖರಾದ ಮಂಜುಳಾ ಕೆರಿಯಪ್ಪ, ಲಕ್ಷ್ಮಮ್ಮ, ಶಕುಂತಲಾ ಪಿ. ಶೇಟ್, ಎಂ. ಲಲಿತಾ, ಮುಖಂಡರಾದ ಜಯಶೀಲಗೌಡ, ಸುನೀಲ್‌ಗೌಡ, ಎನ್.ಜಿ. ನಾಗರಾಜ್, ಪ್ರದೀಪ್ ಬಾಡದಬೈಲು, ಎಂ.ಪಿ. ರತ್ನಾಕರ, ರೇಣುಕಾಪ್ರಸಾದ್, ಮಾರ್ಯಪ್ಪ ಬೆನ್ನೂರು, ಗಣೇಶ್ ಮರಡಿ, ಧರ್ಮಪ್ಪ ದ್ಯಾವಾಸ, ಸುಧಾಕರ ನಾಯ್ಕ್, ಪ್ರಶಾಂತ್ ನಾಯ್ಕ್ ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ

Maharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ...

Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ

Police Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ...

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ)...