Saturday, November 23, 2024
Saturday, November 23, 2024

Admission to Pre-matric Hostel of Social Welfare Department ಸೊರಬ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಸ್ಟೆಲ್ ಗೆ ಪ್ರವೇಶಾತಿ

Date:

Admission to Pre-matric Hostel of Social Welfare Department 2023-24 ನೇ ಸಾಲಿಗೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ಸೊರಬ ವ್ಯಾಪ್ತಿಯಲ್ಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ.ಜಾ /ಪ.ವ. ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಪ್ರವೇಶ ಕೋರಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಸತಿ ನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು www.sw.kar.nic.in ಅಥವಾ www.shp.kar.gov.in  ರಲ್ಲಿ ಜೂನ್ 15 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 


Admission to Pre-matric Hostel of Social Welfare Department ಪ್ರವೇಶ ಪಡೆಯಲು ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಕಾರ್ಡ್, ವಿದ್ಯಾರ್ಥಿಯ ಎಸ್.ಎ.ಟಿ.ಎಸ್ ಸಂಖ್ಯೆ, ಹಿಂದಿನ ತರಗತಿಯಲ್ಲಿ ಪಾಸಾದ ಅಂಕಪಟ್ಟಿ, ವಿದ್ಯಾರ್ಥಿಯ 4 ಭಾವಚಿತ್ರಗಳು, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ಈ ಎಲ್ಲಾ ದಾಖಲೆಗಳಿಗೆ ಶಾಲಾ ಮುಖ್ಯೋಪಾಧ್ಯಯರು ಅಥವಾ ಪ್ರಾಂಶುಪಾಲರಿಂದ ದೃಢೀಕರಿಸಿಕೊಂಡು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕಚೇರಿ, ಸೊರಬ ಅಥವಾ ಆಯಾ ವಿದ್ಯಾರ್ಥಿ ನಿಲಯಗಳಿಗೆ ಸಲ್ಲಿಸುವುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಸೀಟುಗಳ ಲಭ್ಯತೆ ಅನುಸಾರ ತಾಲ್ಲೂಕು ಮಟ್ಟದ ಆಯ್ಕೆ ಸಮಿತಿ ಮೂಲಕ ಇಲಾಖಾ ನಿಯಮಗಳನ್ವಯ ಪ್ರವೇಶಗಳನ್ನು ನೀಡಲಾಗುತ್ತದೆ.


ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 9480843195 ಅಥವಾ ಆಯಾ ವಸತಿ ನಿಲಯದ ಮೇಲ್ವಿಚಾರಕರನ್ನು ಸಂಪರ್ಕಿಸುವಂತೆ ಸೊರಬ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ

Maharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ...

Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ

Police Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ...

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ)...