Saturday, November 23, 2024
Saturday, November 23, 2024

Large And Medium Industries ಲೀಥಿಯಂ ಕೋಶ ಉತ್ಪಾದನೆ: ರಾಜ್ಯದಲ್ಲಿ 8 ಸಾವಿರ ಕೋಟಿ ರೂ. ಹೂಡಿಕೆಗೆ ಐಬಿಸಿ ಕಂಪನಿ ಒಲವು

Date:

Large And Medium Industries ವಿದ್ಯುತ್‌ ಚಾಲಿತ ವಾಹನಗಳಿಗೆ ಅಗತ್ಯವಾದ ಲೀಥಿಯಂ ಕೋಶಗಳ ತಯಾರಿಕೆಗೆ ಹೆಸರಾಗಿರುವ ಇಂಟರ್ ನ್ಯಾಷನಲ್‌ ಬ್ಯಾಟರಿ ಕಂಪನಿ (ಐಬಿಸಿ) ರಾಜ್ಯದಲ್ಲಿ 8,000 ಕೋಟಿ ರೂ. ಬಂಡವಾಳ ಹೂಡಲು ಆಸಕ್ತಿ ತೋರಿದ್ದು, ಈ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕಂಪನಿಯ ಉನ್ನತ ಪ್ರತಿನಿಧಿಗಳೊಂದಿಗೆ ಪ್ರಾಥಮಿಕ ಸುತ್ತಿನ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ವಿದ್ಯುತ್‌ ಚಾಲಿತ ವಾಹನಗಳ ಕ್ಷೇತ್ರ ದಿನದಿಂದ ದಿನಕ್ಕೆ ಜನಪ್ರಿಯವಾಗುತ್ತಿದೆ. ಆದರೆ ನಮ್ಮಲ್ಲಿ ಲೀಥಿಯಂ ಕೋಶಗಳ ಉತ್ಪಾದನೆ ನಡೆಯುತ್ತಿಲ್ಲ. ಐಬಿಸಿ ಕಂಪನಿ ಈ ನಿಟ್ಟಿನಲ್ಲಿ ಮುಂದೆ ಬಂದಿರುವುದು ಸ್ವಾಗತಾರ್ಹವಾಗಿದೆ. ಕಂಪನಿಯು ದೇವನಹಳ್ಳಿಯ ಬಳಿಯಿರುವ ಐಟಿಐಆರ್‍‌ ಪಾರ್ಕ್‌ನಲ್ಲಿ 100 ಎಕರೆ ಜಮೀನನ್ನು ಕೇಳಿದೆ. ಕಂಪನಿ ಕೇಳಿರುವ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಪರಿಶೀಲಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜತೆಗೂ ವಿಸ್ತೃತವಾಗಿ ಚರ್ಚಿಸಲಾಗುವುದು” ಎಂದರು.

ಐಬಿಸಿ ಕಂಪನಿಯು ರಾಜ್ಯದಲ್ಲೇ ನೆಲೆಯೂರುವಂತೆ ನೋಡಿಕೊಳ್ಳಲು ಅಗತ್ಯವಿರುವ ನೆರವು ನೀಡಲಾಗುವುದು. ಜತೆಗೆ ನಮ್ಮ ಕೈಗಾರಿಕಾ ನೀತಿಯ ಪ್ರಕಾರ ಸಾಧ್ಯವಿರುವ ಪ್ರೋತ್ಸಾಹ/ಉತ್ತೇಜನ ಒದಗಿಸಲಾಗುವುದು. ಒಟ್ಟಿನಲ್ಲಿ ರಾಜ್ಯದಲ್ಲಿ ಹೆಚ್ಚು ಹೂಡಿಕೆಯಾಗಿ, ಉದ್ಯೋಗ ಸೃಷ್ಟಿಯಾಗಬೇಕು. ಇದಕ್ಕೆ ಪೂರಕವಾದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಕಂಪನಿಯ ನಿಯೋಗಕ್ಕೆ ಭರವಸೆ ನೀಡಿದರು.

Large And Medium Industries ಐಬಿಸಿ ಕಂಪನಿಯ ಅಧ್ಯಕ್ಷ ವೆಂಕಟೇಶ್‌ ವಲ್ಲೂರಿ ಮಾತನಾಡಿ, “ಭಾರತಕ್ಕೆ 2030ರ ವೇಳೆಗೆ 150 ಗಿಗಾವ್ಯಾಟ್‌ನಷ್ಟು ಲೀಥಿಯಂ ಕೋಶಗಳು ಬೇಕಾಗುತ್ತವೆ. ಆದರೆ ಸದ್ಯಕ್ಕೆ ದೇಶದಲ್ಲಿ ಕೇವಲ 1.5 ಗಿಗಾವ್ಯಾಟ್‌ ಸಾಮರ್ಥ್ಯದ ಉತ್ಪಾದನೆ ಮಾತ್ರ ಆಗುತ್ತಿದ್ದು, ಬೇಡಿಕೆ ಮತ್ತು ಪೂರೈಕೆ ನಡುವೆ ಅಗಾಧ ವ್ಯತ್ಯಾಸವಿದೆ. ಈ ಕ್ಷೇತ್ರಕ್ಕೆ ಮುಂದಿನ ದಿನಗಳಲ್ಲಿ ಭಾರೀ ಬೇಡಿಕೆ ಉಂಟಾಗಲಿದ್ದು, ನಾವು ಸದ್ಯಕ್ಕೆ 8,000 ಕೋಟಿ ಹೂಡಿಕೆಯ ಪ್ರಸ್ತಾವನೆ ಹೊಂದಿದ್ದೇವೆ. ಮುಂದಿನ 20 ವರ್ಷಗಳಲ್ಲಿ 12,300 ಕೋಟಿ ರೂ.ಗಳಿಗೂ ಹೆಚ್ಚು ಲಾಭ ತೆರಿಗೆ ರೂಪದಲ್ಲಿ ರಾಜ್ಯಕ್ಕೆ ಸಿಗಲಿದೆ” ಎಂದು ಸಚಿವರಿಗೆ ವಿವರಿಸಿದರು.

ಐಬಿಸಿ ಕಂಪನಿಯ ಸ್ಥಾಪಕರೆಲ್ಲರೂ ಭಾರತದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದಿದ, ಭಾರತೀಯ ಪ್ರತಿಭಾವಂತರೇ ಆಗಿದ್ದಾರೆ. ಕಂಪನಿಯ ಉತ್ಪಾದನಾ ಘಟಕವು ರಾಜ್ಯದಲ್ಲಿ ಆರಂಭವಾದರೆ ಸಾವಿರಾರು ಉದ್ಯೋಗಗಳು ಕೂಡ ಸೃಷ್ಟಿಯಾಗಲಿದ್ದು, ಆರ್ಥಿಕ ಬೆಳವಣಿಗೆಗೆ ಗಮನಾರ್ಹ ಕೊಡುಗೆ ನೀಡಲಿದೆ. ನಮ್ಮೊಂದಿಗೆ ದಕ್ಷಿಣ ಕೊರಿಯಾದ ತಂತ್ರಜ್ಞರು ಕೂಡ ಕೆಲಸ ಮಾಡಲಿದ್ದು, ಇದರ ಅಂತಿಮ ಲಾಭ ಕರ್ನಾಟಕಕ್ಕೆ ಸಿಗಲಿದೆ ಎಂದು ಅವರು ಪ್ರತಿಪಾದಿಸಿದರು.

ಐಬಿಸಿ ಕಂಪನಿಯ ಸಹ ಸಂಸ್ಥಾಪಕರಾಗಿರುವ ಪ್ರಿಯದರ್ಶಿ ಪಾಂಡಾ, ಶಶಿ ಕುಪ್ಪಣ್ಣಗಾರಿ ಮುಂತಾದವರು ಈ ವಿಚಾರ ವಿನಿಮಯದಲ್ಲಿ ವರ್ಚುಯಲ್‌ ರೂಪದಲ್ಲಿ ಪಾಲ್ಗೊಂಡಿದ್ದರು. ಜತೆಗೆ ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್‌ ಕೃಷ್ಣ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ

Maharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ...

Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ

Police Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ...

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ)...