SC ST Welfare Department ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರಿಗೆ ಸರ್ಕಾರಿ ಇಲಾಖೆಗಳ ವ್ಯಾಪ್ತಿಯಲ್ಲಿ ನಡೆಯುವ ಒಂದು ಕೋಟಿ ರೂ. ಮೊತ್ತದವರೆಗಿನ ಎಲ್ಲಾ ಕಾಮಗಾರಿಗಳಲ್ಲೂ ಮೀಸಲಾತಿ ಒದಗಿಸಲು ರಾಜ್ಯ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಿರುವುದಕ್ಕೆ ಕೆಪಿಸಿಸಿ ಸಂಯೋಜಕ ಹಿರೇಮಗಳೂರು ರಾಮಚಂದ್ರ ಸ್ವಾಗತ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಪ.ಜಾತಿ ಮತ್ತು ಪಂಗಡಕ್ಕೆ ಗುತ್ತಿಗೆ ಕಾಮಗಾರಿಗಳಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಮೀಸಲಾತಿ ಒದಗಿಸಿರುವುದು ಸಂತಸದ ವಿಷಯ ಎಂದಿದ್ದಾರೆ.
ಈ ಹಿಂದೆ 2019ರಲ್ಲಿ 50 ಲಕ್ಷ ರೂ. ವರೆಗಿನ ಮೊತ್ತದ ಕಾಮಗಾರಿಗಳಲ್ಲಿ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ ಮೀಸ ಲಾತಿ ಕಲ್ಪಿಸಲಾಗಿತ್ತು. ಈ ಮೊತ್ತವನ್ನು ಇದೀಗ 01 ಕೋಟಿ ರೂ.ಗೆ ಹೆಚ್ಚಳ ಮಾಡಿ ಸಂಪುಟದಲ್ಲಿ ತೀರ್ಮಾನಿಸ ಲಾಗಿದೆ. ಸರ್ಕಾರಿ ಇಲಾಖೆಗಳ ವ್ಯಾಪ್ತಿಯಲ್ಲಿ ನಡೆಯುವ 01 ಕೋಟಿ ರೂ.ವರೆಗಿನ ಎಲ್ಲಾ ಕಾಮಗಾರಿಗಳಲ್ಲಿ ಪ.ಜಾತಿ ಶೇ.17.15ರಷ್ಟು ಪ.ಪಂಗಡಕ್ಕೆ ಶೇ.6.95ರಷ್ಟು ಮೀಸಲಾತಿ ದೊರೆಯಲಿದೆ ಎಂದರು.
SC ST Welfare Department ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸಮುದಾಯಕ್ಕೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಇದೀಗ ಪ್ರಾರಂ ಭದಲ್ಲಿ ಉತ್ತಮವಾದ ಕೊಡುಗೆ ನೀಡುವ ಮೂಲಕ ಸ್ಪಂದಿಸುವ ಕಾರ್ಯದಲ್ಲಿ ತೊಡಗಿದ್ದು ಜಿಲ್ಲೆಯಲ್ಲಿ ಇರುವಂತ ಹ ಗುತ್ತಿಗೆದಾರರು ಮುಂದಿನ ದಿನಗಳಲ್ಲಿ ಸರಿಸಮಾನವಾಗಿ ಕೆಲಸ ಮಾಡಲು ಅನುಕೂಲವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.