Sunday, November 24, 2024
Sunday, November 24, 2024

Dr. Selvamani R ಶಿವಮೊಗ್ಗ ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿತಾಣಗಳಿವೆ-ಡಾ.ಆರ್.ಸೆಲ್ವಮಣಿ

Date:

Dr. Selvamani R ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಸ್ಕಾಲ್‌ ಇಂಟರ್‌ನ್ಯಾಷನಲ್‌ ಇಂಡಿಯಾ ವತಿಯಿಂದ ಅಕ್ಟೋಬರ್‌ ತಿಂಗಳಿನಲ್ಲಿ ನಡೆಯಲಿರುವ ಸ್ಕಾಲ್‌ ಇಂಡಿಯಾ ಕಾಂಗ್ರೆಸ್‌ ಕಾರ್ಯಕ್ರಮದ ʼಫ್ಲಾಗ್‌‌ ಆಫ್‌ ಫೇತ್ʼ ಅನ್ನು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ಅವರು ಬಿಡುಗಡೆ ಮಾಡಿದರು.

ಶಿವಮೊಗ್ಗದ ಒಕ್ಕಲಿಗರ ಭವನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಕಾಲ್‌ ಸಂಸ್ಥೆಯು ನಡೆಸುತ್ತಿರುವ ಈ ಕಾರ್ಯಕ್ರಮ ಶ್ಲಾಘನೀಯ. ಶಿವಮೊಗ್ಗದಲ್ಲಿ ಬಹಳಷ್ಟು ಪ್ರವಾಸಿ ತಾಣಗಳಿವೆ. ಇಲ್ಲಿನ ಪ್ರವಾಸೋದ್ಯಮ ಸಾಕಷ್ಟು ಅಭಿವೃದ್ಧಿಯಾಗಲಿದೆ. ಇಂತಹ ಕಾರ್ಯಕ್ರಮಕ್ಕೆ ನಮ್ಮ ಸಹಕಾರ ಸದಾ ಇರುತ್ತದೆ ಎಂದರು.

ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಕಾಲ್‌ ಇಂಡಿಯಾ ಕಾಂಗ್ರೆಸ್‌ನ ಚೇರ್‌ಮನ್‌ ಸುದೀಪ್ತಾ ಮಾತನಾಡಿ, ಕೊರೊನಾದಿಂದ ಬಹಳಷ್ಟು ನಷ್ಟ ಅನುಭವಿಸಿದ ಕ್ಷೇತ್ರಗಳ ಪೈಕಿ ಪ್ರವಾಸೋದ್ಯಮ ಪ್ರಮುಖವಾದುದು. ಕರ್ನಾಟಕದ ಪ್ರವಾಸೋದ್ಯಮವನ್ನು ಉತ್ತೇಜಿಸಿ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ರಾಜ್ಯ ಹೆಸರು ಮಾಡುವಂತೆ ಮಾಡುವುದು ನಮ್ಮ ಉದ್ದೇಶ. ಮೈಸೂರು ಹಾಗೂ ಬೆಂಗಳೂರಿನಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಎಕ್ಸಿಬಿಷನ್‌ಗಳು, ಚರ್ಚಾಕೂಟಗಳು ಇರಲಿವೆ ಎಂದು ವಿವರಿಸಿದರು.

ಸ್ಕಾಲ್‌ ಬೆಂಗಳೂರು ವಿಭಾಗದ ಅನುರಾಗ್‌ ಗುಪ್ತಾ ಮಾತನಾಡಿ, ಶಿವಮೊಗ್ಗದಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿವೆ. ಪ್ರಕೃತಿಯ ಮಡಿಲಿನಲ್ಲಿ ಸಮಯ ಕಳೆಯಬೇಕು ಎನ್ನುವವರು ಶಿವಮೊಗ್ಗಕ್ಕೆ ಬರಬೇಕು. ಇಲ್ಲಿನ ಪ್ರವಾಸೋದ್ಯಮವನ್ನು ರಾಷ್ಟ್ರಮಟ್ಟದಲ್ಲಿ ಪ್ರಸಿದ್ಧವಾಗಿಸಲು ಸ್ಕಾಲ್‌ ಕಾಂಗ್ರೆಸ್‌ ಕಾರ್ಯಕ್ರಮ ಸಹಕಾರಿಯಾಗಲಿದೆ.

ಕಾರ್ಯಕ್ರಮದಲ್ಲಿ ನಡೆಯುವ ಎಕ್ಸಿಬಿಷನ್‌ನಲ್ಲಿ ಶಿವಮೊಗ್ಗ ಪ್ರವಾಸೋದ್ಯಮವನ್ನು ಪರಿಚಯಿಸುವ ಮಳಿಗೆ ಸಹ ಇರಲಿದೆ. ಈ ಕಾರ್ಯಕ್ರಮದಿಂದ ಒಟ್ಟಾರೆಯಾಗಿ ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದರು.

Dr. Selvamani R ಸ್ಕಾಲ್‌ ಇಂಟರ್‌ನ್ಯಾಷನಲ್‌ ಇಂಡಿಯಾ ವತಿಯಿಂದ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಅಕ್ಟೋಬರ್‌4ರಿಂದ 7ರವರೆಗೆ ಮೈಸೂರು ಹಾಗೂ ಬೆಂಗಳೂರಿನಲ್ಲಿ ಸ್ಕಾಲ್‌ಇಂಡಿಯಾ ಕಾಂಗ್ರೆಸ್‌ ಕಾರ್ಯಕ್ರಮ ನಡೆಯಲಿದೆ. ಪ್ರವಾಸೋದ್ಯಮದ ಏಳಿಗೆಗೆ, ಅಭಿವೃದ್ಧಿಗೆ ಶ್ರಮಿಸುವ ವೃತ್ತಿಪರರ ಸಮಾಗಮ ಇದಾಗಿದೆ. ಈ ನಿಟ್ಟಿನಲ್ಲಿ ಮುಂದಿನ ಮೂರು ತಿಂಗಳುಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸೋದ್ಯಮಕ್ಕೆ ಸಂಬಂಧಪಟ್ಟ ವಿವಿಧ ಚಟುವಟಿಕೆಗಳು ನಡೆಯಲಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ

Maharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ...

Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ

Police Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ...

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ)...