Monday, November 25, 2024
Monday, November 25, 2024

Udupi video case ಉಡುಪಿ ವಿಡಿಯೋ ಪ್ರಕರಣ:ಬಿಜೆಪಿ ಅಗ್ಗದ ದೊಂಬರಾಟ- ವೈ.ಬಿ.ಚಂದ್ರಕಾಂತ್

Date:

Udupi video case ಉಡುಪಿ ನವಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜ್‌ನ ಶೌಚಾಲಯದಲ್ಲಿ ಮೂವರು ಮುಸ್ಲಿಂ ಯುವತಿಯರು ಹಿಂದೂ ವಿದ್ಯಾರ್ಥಿನಿಯರ ವೀಡಿಯೋ ಸೆರೆ ಹಿಡಿದು ದುರ್ಬಳಕೆ ಮಾಡಿಕೊಳ್ಳುತ್ತಿದ್ದರೆಂದು ಬಿ.ಜೆ.ಪಿ.ರಾಜ್ಯಾದ್ಯಂತ ಪ್ರತಿಭಟನೆ ಮಾಡಿದ್ದಲ್ಲದೆ, ರಾಜ್ಯದ ಕಾಂಗ್ರೇಸ್ ಸರ್ಕಾರ ಮುಸ್ಲಿಂರ ಓಲೈಕೆಯ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರು ರಾಜ್ಯಕ್ಕೆ ಭೇಟಿ ನೀಡಿರುವ ಹೇಳಿಕೆಯಿಂದ ರಾಜ್ಯ ಮತ್ತು ದೇಶದ ಜನರ ಮುಂದೆ ಭಾರತೀಯ ಜನತಾ ಪಕ್ಷದ ನಾಯಕರು ಬೆತ್ತಲಾದಂತೆ ಆಗಿದೆ ಜಿಲ್ಲಾ ಕಾಂಗ್ರೇಸ್ ವಕ್ತಾರರಾದ ವೈ.ಬಿ.ಚಂದ್ರಕಾoತ್ ಟೀಕಿಸಿದ್ದಾರೆ.

ಕಾಲೇಜ್‌ನಲ್ಲಿ ಮುಸ್ಲಿಂ ಯುವತಿಯರು ಹಿಂದಿನಿoದಲೂ ಶೌಚಾಲಯದಲ್ಲಿ ಹಿಂದೂ ಯುವತಿಯರ ಖಾಸಗಿ ವೀಡಿಯೋಗಳನ್ನು ಸೆರೆ ಹಿಡಿದು ಬ್ಲಾಕ್‌ಮೇಲ್ ಮಾಡಲು ಬಳಸಿಕೊಳ್ಳುತ್ತಿದ್ದರು. ಇದೀಗ ಹೊರ ಬಂದಿರುವ ಘಟನೆಯನ್ನು ರಾಜ್ಯ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಬಿ.ಜೆ.ಪಿ. ಸೇರಿದಂತೆ ಅದರ ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡಿದ್ದವು. ಬಿ.ಜೆ.ಪಿ. ಹೋರಾಟದ ಹಿಂದೆಯೆ ರಾಜ್ಯದ ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಸಾರಗೊಂಡಿದ್ದವು.

ಈ ಹಿನ್ನಲೆಯಲ್ಲಿ ರಾಷ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್, ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಮತ್ತು ಕಾಲೇಜ್‌ಗೆ ಭೇಟಿ ನೀಡಿ ಸಮಗ್ರ ಮಾಹಿತಿ ಪಡೆದು ಮಾಧ್ಯಮಗಳೊಂದಿಗೆ ಮಾತನಾಡಿ, ಕಾಲೇಜ್‌ನಲ್ಲಿ ಘಟನೆ ನಡೆದಿರುವ ಬಗ್ಗೆ ಇದುವರೆಗೆ ಯಾವುದೆ ವೀಡಿಯೋಗಳು, ಇತರೆ ಸಾಕ್ಷಾಧಾರಗಳು ದೊರಕಿಲ್ಲ. ಆದರೂ, ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Udupi video case ಮುಂದಿನ ಪ್ರಕ್ರಿಯೆ ನಡೆಯುತ್ತಿದೆ. ಈ ಘಟನೆ ನಡೆದಿರುವುದು ಸತ್ಯವೆ ಅಥವಾ ಸುಳ್ಳೆ ಎನ್ನುವುದು ಸಾಬೀತು ಆಗಬೇಕಾಗಿದೆ. ಇದರಿಂದಾಗಿ ವಿದ್ಯಾರ್ಥಿನಿಯರ ಮತ್ತು ವಿದ್ಯಾರ್ಥಿನಿಯರ ಶೈಕ್ಷಣಿಕ ಹಿತದೃಷ್ಠಿಯಿಂದ ಯಾರೆ ಆಗಲಿ ಅನಾವಶ್ಯಕವಾಗಿ ಸುಳ್ಳು ಸುದ್ದಿಗಳನ್ನು ಹರಡಬಾರದೆಂದು ಹೇಳಿಕೆ ನೀಡಿದ್ದರು.
ಆದರೆ, ರಾಜ್ಯದಲ್ಲಿ ಈ ಹಿಂದೆ ಬಿ.ಜೆ.ಪಿ. ಸರ್ಕಾರವಿದ್ದಾಗ ನಡೆದು ಸುದ್ದಿಯಾಗಿದ್ದ ಹಲವಾರು ಕೊಲೆ, ಅತ್ಯಾಚಾರ ಪ್ರಕರಣಗಳ ಬಗ್ಗೆ ಚಕಾರ ಎತ್ತದ ಬಿ.ಜೆ.ಪಿ.ಗೆ ಉಡುಪಿಯಲ್ಲಿ ನಡೆದಿದೆ ಎನ್ನಲಾದ ವೀಡಿಯೋ ಪ್ರಕರಣವು ಪ್ರಭಲವಾದ ಅಸ್ತçವೇ ಸಿಕ್ಕಂತ್ತಾಗಿ ಹೋರಾಟಕ್ಕೆ ಇಳಿದಿತ್ತು. ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರ ಈ ಹೇಳಿಕೆಯಿಂದ ಭಾರತೀಯ ಜನತಾ ಪಕ್ಷದ ನಾಯಕರು ರಾಜ್ಯದ ಜನರ ಮುಂದೆ ತಾವೇ ಬೆತ್ತಲಾದಂತೆ ಆಗಿದೆ. ಆದರೂ, ಘಟನೆಯನ್ನು ಇಲ್ಲಿಗೆ ಬಿಡದೆ ರಾಷ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಅವರ ಹೇಳಿಕೆ ಹೊರ ಬೀಳುತ್ತಿದ್ದಂತೆ ಆಯೋಗದ ಸದಸ್ಯೆ ಖುಷ್ಬೂ ಅವರನ್ನೆ ಬಿ.ಜೆ.ಪಿ. ನಾಯಕರು, ಅದರ ಸಂಘಟನೆಗಳ ಬೆಂಬಲಿಗರು ವ್ಯಾಪಕವಾಗಿ ಟೀಕಿಸುತ್ತಿದ್ದಾರೆ. ಇನ್ನು ಸದಸ್ಯೆ ಖುಷ್ಬೂ ಅವರ ಉಡುಪಿ ಭೇಟಿಯ ಸಂದರ್ಭದಲ್ಲಿ ಬಿ.ಜೆ.ಪಿ ಮತ್ತು ಕಾಂಗ್ರೇಸ್ ಪಕ್ಷದವರು ಹಾಜರಿದ್ದರೂ ಈ ವಿಷಯವನ್ನು ಹಿಡಿದುಕೊಂಡು ಬಿ.ಜೆ.ಪಿ. ಅಗ್ಗದ ರಾಜಕೀಯ ದೊಂಬರಾಟಕ್ಕೆ ಇಳಿದಿರುವುದನ್ನು ನೊಡಿದರೆ ಭಾರತೀಯ ಜನತಾ ಪಕ್ಷದ ನಾಯಕರಿಗೆ ಸತ್ಯಕ್ಕಿಂತ ಅಸತ್ಯವೆ ಮಿಗಿಲಾದಂತೆ ಕಾಣುತ್ತಿದೆ ಎಂದು ಜಿಲ್ಲಾ ಕಾಂಗ್ರೇಸ್ ವಕ್ತಾರರಾದ ವೈ.ಬಿ.ಚಂದ್ರಕಾAತ್ ಅವರು ಕುಟುಕಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

COSMO Club Shivamogga ಅಧ್ಯಯನಶೀಲ ತತ್ವದತ್ತ ಮುನ್ನಡೆದು ಸಮರ್ಥ ಸಮಾಜಕ್ಕೆ ದೀಪವಾಗೋಣ- ರಂಜಿನಿ ದತ್ತಾತ್ರಿ

COSMO Club Shivamogga ನಮ್ಮ ನಿಮ್ಮ ನಗುವಿಗೊಂದು ದೀಪ, ಸಂತಸದ ಬೆಳಕಿಗೊಂದು...

MESCOM ನವೆಂಬರ್ 27. ಎಂ.ಆರ್.ಎಸ್. ನಲ್ಲಿ ತ್ರೈಮಾಸಿಕ ನಿರ್ವಹಣೆ. ಶಿವಮೊಗ್ಗದ ಬಹುಪಾಲು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ...