Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿ ಗಳ ಅರ್ಹ ಅಭ್ಯರ್ಥಿಗಳಿಂದ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ಆಸಕ್ತ ೧೭೧/೨ ರಿಂದ ೨೧ ವರ್ಷದೊಳಗಿನ ಯುವಕರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಆನ್‌ಲೈನ್ ಮೂಲಕ ಸೆ. ೧೫ ರೊಳಗಾಗಿ ಅರ್ಜಿ ಸಲ್ಲಿಸುವುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ಆದಾಯ ಪ್ರವರ್ಗ-೧ಕ್ಕೆ ರೂ. ೨.೫೦ ಲಕ್ಷಗಳು ಹಾಗೂ ಪ್ರ-೨ಎ, ೩ಎ, ೩ಬಿ ಗಳಿಗೆ ರೂ. ೧.೦೦ ಲಕ್ಷಗಳಾಗಿದ್ದು, ಅಭ್ಯರ್ಥಿಯು ೧೦ನೇ ತರಗತಿಯಲ್ಲಿ ಪ್ರತಿ ವಿಷಯದಲ್ಲಿ ಕನಿಷ್ಠ ೩೩ ಅಂಕಗಳನ್ನು ಪಡೆದಿರಬೇಕು.
Backward Classes Welfare Department ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಯಾವುದಾದರೊಂದು ಜಿಲ್ಲೆಯನ್ನು ಮಾತ್ರ ಆಯ್ಕೆ ಮಾಡುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣ ಸಂ.:8050770004, ದ.ಕ.-0824-2225078, ಉಡುಪಿ -0820-2574881 ಮತ್ತು ಉ.ಕ..-08382-226589 ಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.