Saturday, November 23, 2024
Saturday, November 23, 2024

Department of Women and Child Welfare ಗೃಹಲಕ್ಷ್ಮಿ ಯೋಜನೆಯಲ್ಲಿ ನೋಂದಾಯಿತರಾದ ಮನೆಯ ಯಜಮಾನಿಗೆ ಇಂದಿನಿಂದ ಮಾಸಿಕ ₹2000 ಜಮೆ- ಸಚಿವ ಮಧು ಬಂಗಾರಪ್ಪ

Date:

Department of Women and Child Welfare ಸಾಮಾನ್ಯ ಜನರ ಜೀವನದಲ್ಲಿ ಸದಾ ಕಾಲ ಸರ್ಕಾರದ ಸಹಕಾರವೇ ಗೃಹಲಕ್ಷ್ಮಿಯಂತಹ ಯೋಜನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ನುಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಮಹಾನಗರಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಗೃಹಲಕ್ಷ್ಮಿ ಯೋಜನೆಯ ಅನುಷ್ಟಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗೃಹಲಕ್ಷ್ಮಿ ಯೋಜನೆ ಒಂದು ಐತಿಹಾಸಿಕ ಮತ್ತು ದೇಶದಲ್ಲಿಯೇ ಅಚ್ಚರಿ ಮೂಡಿಸುವಂತಹ ಕಾರ್ಯಕ್ರಮವಾಗಿದೆ. ಪ್ರತಿ ಕುಟುಂಬದ ಯಜಮಾನಿಯರೇ ಆ ಕುಟುಂಬದ ನಿಜವಾದ ಮುಖ್ಯಮಂತ್ರಿಗಳು. ಅವರ ಮೇಲೆ ಇಡೀ ಕುಟುಂಬ ನಿರ್ವಹಣೆ ಜವಾಬ್ದಾರಿ ಇರುತ್ತದೆ. ಬೆಲೆ ಏರಿಕೆಯ ಸಂದರ್ಭದಲ್ಲಿ ಹಾಗೂ ಮಹಿಳೆಯರ ಆರ್ಥಿಕ ಸಬಲೀಕರಣದ ವಿಷಯದಲ್ಲಿ ಗೃಹಲಕ್ಷ್ಮಿ ಯೋಜನೆ ಮುಖ್ಯ ಪಾತ್ರ ವಹಿಸುತ್ತದೆ.
ರಕ್ಷಾ ಬಂಧನದ ದಿನದಂದು ರಾಜ್ಯ ಸರ್ಕಾರ ಸಹೋದರನ ಸ್ಥಾನದಲ್ಲಿ ನಿಂತು ಮನೆಯ ಯಜಮಾನಿಯರಾಗಿರುವ ಸಹೋದರಿಯರಿಗೆ ರೂ.2000 ಕೊಡುಗೆಯನ್ನು ನೀಡುತ್ತಿರುವ ಸಂತೋಷದ ದಿನ ಇದಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾದ ಮಹಿಳಾ ಫಲಾನುಭವಿಗಳ ಖಾತೆಗೆ ಇಂದಿನಿಂದ ಪ್ರತಿ ತಿಂಗಳು ರೂ.2000 ಜಮೆಯಾಗಲಿದೆ.
ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ, ತಿಳಿಸಿದರು.

ನಮ್ಮ ಮೇಲೆ ವಿಶ್ವಾಸವಿಟ್ಟು ನಮ್ಮನ್ನು ಆರಿಸಿ ಕಳುಹಿಸಿದ್ದೀರಿ. ಸರ್ಕಾರ ತಾನು ನೀಡಿದ ವಾಗ್ದಾನದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿರುವ ‘ಶಕ್ತಿ’ ಯೋಜನೆ ಮಹಿಳೆಯರನ್ನು ಸಬಲಗೊಳಿಸಿದೆ.
ಯಾವುದೇ ವ್ಯಕ್ತಿ ಹಸಿವಿನಿಂದ ಮಲಗಿದರೆ ಸರ್ಕಾರದಕ್ಕೆ ಗೌರವ ಸಿಗುವುದಿಲ್ಲ. ಆದ್ದರಿಂದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿಯನ್ನು ನೀಡುವ ಭರವಸೆಯನ್ನು ಸರ್ಕಾರ ನೀಡಿತ್ತು. ಸದ್ಯಕ್ಕೆ ಅಕ್ಕಿ ಲಭ್ಯತೆ ಸಾಕಷ್ಟು ಇಲ್ಲದ ಕಾರಣ, 5 ಕೆಜಿ ಅಕ್ಕಿ ಬದಲಾಗಿ ಕುಟುಂಬದ ತಲಾ ಸದಸ್ಯರಿಗೆ ರೂ.170 ಗಳನ್ನು ನೀಡಲಾಗುತ್ತಿದೆ. ಹಾಗೂ 32 ವರ್ಷದಿಂದ ರೈತರಿಗೆ 10 ಹೆಚ್‍ಪಿ ಪಂಪ್‍ಸೆಟ್‍ಗೆ ಉಚಿತವಾಗಿ ವಿದ್ಯುತ್ ನೀಡಲಾಗುತ್ತಿದೆ.

Department of Women and Child Welfare ಗೃಹಜ್ಯೋತಿ ಯೋಜನೆಯಡಿ ಪ್ರತಿ ಗೃಹ ಬಳಕೆದಾರರಿಗೆ ಗರಿಷ್ಟ 200 ಯುನಿಟ್‍ವರೆಗೆ ಉಚಿತ ವಿದ್ಯುತ್ ನೀಡುತ್ತಿರುವುದು ಜನರಿಗೆ ಅತ್ಯಂತ ಸಹಕಾರಿಯಾಗಿದೆ.
ಅಂಬೇಡ್ಕರ್ ಅವರ ಆಶಯದಂತೆ ಇಂದು ಎಲ್ಲ ಜಾತಿ, ಮತ, ವರ್ಗದವರು ಒಂದಾಗಿ, ಒಂದೇ ವೇದಿಕೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತಸದ ವಿಷಯ ಎಂದರು.

ಸರ್ಕಾರ ನುಡಿದಂತೆ ದೇಶದಲ್ಲೇ ಗೃಹಲಕ್ಷ್ಮಿಯಂತಹ ಉತ್ತಮ ಕಾರ್ಯಕ್ರಮವನ್ನು ನೀಡಿದ ರಾಜ್ಯ ಸರ್ಕಾರ ಜಯಶಾಲಿಯಾಗಿದೆ. ಸರ್ಕಾರ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರಲಿದೆ ಎಂದರು.

ಜಿಲ್ಲೆಯಲ್ಲಿ ಈವರೆಗೆ 360294 ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾಗಿದ್ದು, ಇನ್ನೂ 32000 ಮಹಿಳೆಯರ ನೋಂದಣಿ ಬಾಕಿ ಇದೆ. ನೋಂದಣಿಯಾದ ಫಲಾನುಭವಿಗಳು ತಮ್ಮ ಅಕ್ಕಪಕ್ಕದವರಿಗೆ ಈ ಬಗ್ಗೆ ತಿಳಿಸಿ ಸಹಕರಿಸಬೇಕು. ಹಾಗೂ ಜಿಲ್ಲಾಧಿಕಾರಿಗಳು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳು ಇನ್ನು 7 ರಿಂದ 10 ದಿನಗಳ ಒಳಗೆ ಈ ಬಾಕಿ ನೊಂದಣಿ ಮಾಡಿಸಿ ಶೇ.100 ಗುರಿ ತಲುಪಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಗೃಹಲಕ್ಷ್ಮಿ ಯೋಜನೆಯ ರೂ.2000 ಗಳನ್ನು ವಿತರಣೆ ಮಾಡಿದರು. ಹಾಗೂ ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮದ ನೇರ ಪ್ರಸಾರವನ್ನು ಎಲ್‍ಇಡಿ ಪರದೆಗಳಲ್ಲಿ ಪ್ರದರ್ಶಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಶಾಸಕರಾದ ಆರ್.ಪ್ರಸನ್ನಕುಮಾರ್, ಪಾಲಿಕೆ ಸದಸ್ಯರಾದ ಹೆಚ್.ಸಿ.ಯೋಗೇಶ್, ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಎಸಿ ಸತ್ಯನಾರಾಯಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಸಂತೋಷ್ ಕುಮಾರ್, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಸುಂದರೇಶ್, ಇತರೆ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ

Maharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ...

Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ

Police Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ...

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ)...