KSRTC Bus ಗೌರಿ ಗಣೇಶ ಹಬ್ಬದ ಪ್ರಯುಕ್ತ 1200 ಹೆಚ್ಚುವರಿ ಬಸ್ ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲು ಕೆಎಸ್ಆರ್ಟಿಸಿ ನಿರ್ಧರಿಸಿದೆ.
ಸೆಪ್ಟೆಂಬರ್ 15 ರಿಂದ ಮೂರು ದಿನಗಳ ಕಾಲ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಮತ್ತು ಸೆಪ್ಟೆಂಬರ್ 18ರಿಂದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್ ಗಳು ಸಂಚರಿಸಲಿವೆ.
ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ಗಳಲ್ಲಿ ಮುಂಗಡವಾಗಿ ಆಸನಗಳನ್ನು ಕಾಯ್ದರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕರ್ನಾಟಕ ಮತ್ತು ಬೇರೆ ರಾಜ್ಯಗಳ 691 ಬುಕ್ಕಿಂಗ್ ಕೌಂಟರ್ ಗಳಲ್ಲಿ ಮುಂಗಡವಾಗಿ ಸೀಟ್ ಗಳನ್ನು ಕಾಯ್ದಿರಿಸಬಹುದು. ಈ ಬಸ್ ಇ ಟಿಕೇಟ್ ಬುಕ್ಕಿಂಗ್ ಗಾಗಿ ಈ ಕೆಳಕಂಡ ಲಿಂಕನ್ನು ಬಳಸಬಹುದು.
www.ksrtc.karnataka.gov.in ಈ ವೆಬ್ಸೈಟ್ ಬಳಸಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡವಾಗಿ ಟಿಕೆಟ್ ಕಾಯ್ದೆಸಿದ್ದಲ್ಲಿದೆ 5% ರಿಯಾಯಿತಿ ದೊರೆಯುತ್ತದೆ. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಗಳನ್ನು ಒಟ್ಟಿಗೆ ಕಾಯ್ದಿಸಿದಾಗ ಬರುವ ಪ್ರಯಾಣ ದರದಲ್ಲಿ ಹತ್ತರಷ್ಟು ರಿಯಾಯಿತಿ ದೊರೆಯಲಿದೆ.
KSRTC Bus ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿರುವ ಎಲ್ಲಾ ತಾಲೂಕು, ಜಿಲ್ಲಾ ಕೇಂದ್ರಗಳ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಭಾಸ್ ಕಾರ್ಯಚರಣೆ ಮಾಡಲಾಗುತ್ತಿದೆ ಎಂದು ಕೆ ಎಸ್ ಆರ್ ಟಿ ಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.