Sunday, November 24, 2024
Sunday, November 24, 2024

Essay Competition ಗಾಂಧಿ ಜಯಂತಿ ವಿಶೇಷ ಯುವಜನರಿಗೆ ಪ್ರಬಂಧ ಸ್ಪರ್ಧೆ ಮಾಹಿತಿ

Date:

Essay Competition ಮಹಾತ್ಮಾ ಗಾಂಧೀಜಿಯವರ 154 ನೇ ಜಯಂತಿಯ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಮಹಾತ್ಮಾ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪøಶ್ಯತೆ ನಿವಾರಣೆಗಾಗಿ ಅವರು ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಕುರಿತು ಅರಿವು ಮೂಡಿಸಲು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುವುದು.

ಪ್ರೌಢಶಾಲಾ ವಿಭಾಗದಲ್ಲಿ ‘ನನಗೇಕೆ ಗಾಂಧೀಜಿ ಇಷ್ಟವಾಗುತ್ತಾರೆ, ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ’ ಈ 3 ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 900 ಪದಗಳಿಗೆ ಮೀರದಂತೆ ಪ್ರಬಂಧ ರಚಿಸಬೇಕು.

ಪದವಿಪೂರ್ವ ಶಿಕ್ಷಣ ವಿಭಾಗದಲ್ಲಿ ‘ದೇಶದ ಕಳಂಕವಾದ ಅಸ್ಪøಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ’ ಈ 3 ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 1500 ಪದಗಳಿಗೆ ಮೀರದಂತೆ ಪ್ರಬಂಧ ರಚಿಸಬೇಕು.

Essay Competition ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದಲ್ಲಿ ‘ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು, ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು, ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, ಗಾಂಧೀಜಿಯವರ ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು’ ಈ 3 ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 2000 ಪದಗಳಿಗೆ ಮೀರದಂತೆ ಪ್ರಬಂಧ ರಚಿಸಬೇಕು.

ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ತಾವು ರಚಿಸಿದ ಪ್ರಬಂಧಗಳನ್ನು ತಮ್ಮ ಸಂಸ್ಥೆಗಳ ಮುಖ್ಯಸ್ಥರಿಗೆ ಗುರುತಿನ ಚೀಟಿ ಹಾಗೂ ಸಂಪರ್ಕ ವಿವರಗಳನ್ನು ಲಗತ್ತಿಸಿ ಸಲ್ಲಿಸಬೇಕು. ಪ್ರತಿ ಶಾಲೆ/ಕಾಲೇಜು/ಪದವಿ, ಸ್ನಾತಕೋತ್ತರ ಪದವಿ ವಿಭಾಗಗಳ ಮುಖ್ಯಸ್ಥರು ಆಯ್ದ ಅತ್ಯುತ್ತಮ ಮೂರು ಪ್ರಬಂಧಗಳನ್ನು
ದಿ: 26-09-2023 ರೊಳಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಿಲ್ಲಾ ಕಚೇರಿಗೆ ತಲುಪಿಸಬೇಕು.

ಮೂರು ಪ್ರತ್ಯೇಕ ವಿಭಾಗಗಳ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ ರೂ.3000, ದ್ವಿತೀಯ ಸ್ಥಾನ ರೂ.2000 ಮತ್ತು ತೃತೀಯ ಸ್ಥಾನಕ್ಕೆ ರೂ.1000 ಮತ್ತು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ ರೂ.31,000, ದ್ವಿತೀಯ ಸ್ಥಾನಕ್ಕೆ ರೂ.21,000 ಮತ್ತು ತೃತೀಯ ಸ್ಥಾನಕ್ಕೆ ರೂ.11,000 ಬಹುಮಾನ ನೀಡಲಾಗುವುದು.

ಪ್ರಬಂಧ ಸಂಪೂರ್ಣ ಸ್ವರಿಚತವಾಗಿದ್ದು, ನುಡಿ ಇಲ್ಲವೇ ಯೂನಿಕೋಡ್ ಬೆರಳಚ್ಚು ಮಾಡಿರಬೇಕು. ಆಕರವಾಗಿ ಬಳಸಿದ ಪರಾಮರ್ಶನ/ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು.

ಪ್ರಬಂಧಕಾರರ ಹೆಸರು ವಿಳಾಸ ನಮೂದಿಸಬೇಕು. ಪ್ರಬಂಧ ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Priyanka Gandhi ಕೇರಳ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಅತ್ಯಧಿಕ ಮತಗಳಿಂದ ಆಯ್ಕೆ

Priyanka Gandhi ಪ್ರಿಯಾಂಕಾ ಗಾಂಧಿ ವಾದ್ರಾ 4,10,931 ಮತಗಳ ಅಂತರದಿಂದ ಗೆದ್ದಿದ್ದಾರೆ,...

SP Mithun Kumar ಮದ್ಯವರ್ಜನ ಶಿಬಿರ ಚಾಲನೆ, ಸಮಾಜಕ್ಕೆ ಹೆಚ್ಚು ಉಪಯುಕ್ತ- ಎಸ್.ಪಿ .ಮಿಥುನ್ ಕುಮಾರ್

SP Mithun Kumar ಶಿವಮೊಗ್ಗ,ನ.22 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...

Kuvempu Birthday ಕುವೆಂಪು ಜನ್ಮದಿನದ ವಿಶೇಷ ಷಿಕಾರಿಪುರದಲ್ಲಿ ನಾಟಕ ಸ್ಪರ್ಧೆ

Kuvempu Birthday ಸಹ್ಯಾದ್ರಿ ರಂಗತರಂಗ ನಾಟಕ ಸ್ಪರ್ಧೆ ಶಿವಮೊಗ್ಗ ನಗರದ ಸಹಾದ್ರಿ...

Dargah Shah Aleem Deewan ಶಿವಮೊಗ್ಗದ ದಿವಾನ್ ಭಾಬಾ ದರ್ಗಾದಲ್ಲಿ ನ.24 ರಿಂದ 26 ವರೆಗೆ ಉರುಸ್

Dargah Shah Aleem Deewan ಶಿವಮೊಗ್ಗದ ಹಜ್ರತ್ ಸೈಯದ್ ಶಾ ಅಲೀಮ್...