Scout and Guide ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿ. ಪ್ರತಿಯೊಂದು ಮನೆಯಲ್ಲೂ ಮಕ್ಕಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಕಲಿಸಲು ಪೋಷಕರು ಮುಂದಾಗಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿಯಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಅವರು ಹೇಳಿದರು.
ಶಿವಮೊಗ್ಗ ನಗರದ ಬಿಎಚ್ ರಸ್ತೆಯಲ್ಲಿರುವ ಜಿಲ್ಲಾ ಸ್ಕೌಟ್ ಭವನದಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಅಭಿವೃದ್ಧಿ ಸಮಾಲೋಚನಾ ಸಭೆಯಲ್ಲಿ ಮಾತನಾಡಿ, ಸ್ಕೌಟ್ ಮತ್ತು ಗೈಡ್ ಚಳವಳಿ ಅಂತರಾಷ್ಟ್ರೀಯ ಯುವ ಸಂಘಟನೆ ನಾಲ್ಕು ಕೋಟಿಗೂ ಮೀರಿದ್ದು, ಪ್ರಪಂಚದ 216 ದೇಶಗಳಲ್ಲಿ ತನ್ನ ಅಸ್ತಿತ್ವ ಹೊಂದಿದೆ ಎಂದು ತಿಳಿಸಿದರು.
ಯುವ ಸಮುದಾಯಕ್ಕೆ ಸಾಮಾಜಿಕ ಹೊಣೆಗಾರಿಕೆ ಹಾಗೂ ಜೀವನ ಮೌಲ್ಯಗಳ ಬೆಳವಣಿಗೆಗೆ ಸ್ಕೌಟ್ ಸಂಪೂರ್ಣ ಸಹಕಾರಿಯಾಗುತ್ತದೆ. ಸ್ಕೌಟ್ ಮತ್ತು ಗೈಡ್ ಚಳವಳಿಯನ್ನು ಉತ್ತಮ ರೀತಿಯಲ್ಲಿ ಸಮಾಜದಲ್ಲಿ ಮುನ್ನಡೆಸಬೇಕು ಎಂದರು.
ಶಿವಮೊಗ್ಗ ಜಿಲ್ಲಾ ಭಾರತ್ ಸ್ಕೌಟ್ ಮತ್ತು ಗೈಡ್ ಮುಖ್ಯ ಆಯುಕ್ತ ಎಚ್.ಡಿ.ರಮೇಶ್ ಶಾಸ್ತ್ರೀ ಮಾತನಾಡಿ, ಶಾಲೆ ಮತ್ತು ಮನೆಯ ಶಿಕ್ಷಣ ಜತೆಯಲ್ಲಿ ಜೀವನಕ್ಕೆ ಅವಶ್ಯವಿರುವ ಮೌಲ್ಯಗಳನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಕಲಿಸುತ್ತದೆ. ಯುವಜನರಿಗೆ ಪರಿಣಾಮಕಾರಿಯಾಗಿ ತಲುಪಿಸಬೇಕಿದೆ. ರಾಜ್ಯ ಶಾಖೆಯ ಅನುಮತಿಯೊಂದಿಗೆ ಎಲ್ಲ ಅಧಿಕಾರಿಗಳ ಸಹಕಾರದಿಂದ ಶಿವಮೊಗ್ಗ ಶಾಖೆಯಿಂದ ಉತ್ತಮ ಕೆಲಸ ನಡೆಸುತ್ತಿದೆ ಎಂದು ಹೇಳಿದರು.
Scout and Guide ಜಿಲ್ಲಾ ಸ್ಕೌಟ್ ಆಯುಕ್ತ ಕೆ.ಪಿ.ಬಿಂದುಕುಮಾರ್, ಜಿಲ್ಲಾ ಕಾರ್ಯದರ್ಶಿ ಎಚ್.ಪರಮೇಶ್ವರ್, ಜಿಲ್ಲಾ ಜಂಟಿ ಕಾರ್ಯದರ್ಶಿ ವೈ.ಆರ್.ವೀರೇಶಪ್ಪ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭಾರತಿ ಡಯಾಸ್, ಸ್ಥಳಿಯ ಸಂಸ್ಥೆ ಕಾರ್ಯದರ್ಶಿ ರಾಜೇಶ ವಿ ಅವಲಕ್ಕಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯ್‌ಕುಮಾರ್, ಜಿಲ್ಲಾ ಖಜಾಂಚಿ ಚೂಡಾಮಣಿ ಪವಾರ್, ದೇವಪ್ಪ ಉಪಸ್ಥಿತರಿದ್ದರು.