ಒಂದೊಂದು ಊರಿಗೆ ಒಂದೊಂದು ನಾಡಹಬ್ಬವಿದೆ. ಹಾಗೆ ಕರ್ನಾಟಕದಲ್ಲಿ ಕನ್ನಡಿಗರಿಗೆ ಪ್ರಮುಖ ನಾಡಹಬ್ಬವೇ ದಸರಾ ಮಹೋತ್ಸವ. ವಿಜಯನಗರ ಸಾಮ್ರಾಜ್ಯ ಕಾಲದಿಂದಲೂ ಈ ನಾಡಹಬ್ಬ ದಸರಾವನ್ನು ವೈಭವದಿಂದ ಆಚರಿಸುತ್ತಾ, ಮೈಸೂರು ದೊರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತಾವಧಿಯಲ್ಲಿ ಆಚರಣೆಯನ್ನು ಮುಂದುವರೆಸಿಕೊಂಡು ಬಂದಿದ್ದೇವೆ ಎಂದು ಶಿವಮೊಗ್ಗ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ತಿಳಿಸಿದ್ದಾರೆ.
ಈ ನಾಡ ಹಬ್ಬಕ್ಕೆ ತನ್ನದೇ ಆದ ಇತಿಹಾಸವಿದ್ದು, ಈ ಪಾರಂಪರೆಯನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
Dussehra festival ಇಂದು ಬೆಳಿಗ್ಗೆ ನಾಡ ದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ಆಶೀರ್ವಾದವನ್ನು ಪಡೆದು, ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ವಿಜೃಂಭಣೆಯಿಂದ ನಡೆಯಲಿರುವ ದಸರಾ ಮಹೋತ್ಸವಕ್ಕೆ ಕೋಟೆ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಿಯ ಸನ್ನಿಧಿಯಲ್ಲಿ ಚಾಲನೆ ನೀಡಲಾಯಿತು.