Siddaramaiah ಪ್ರಧಾನಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ಮಾತನಾಡುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ಬಾಲಿಶವಾದುದ್ದು. ದೇಶದ ಜನರಿಂದ ಆಯ್ಕೆಯಾಗಿ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಪ್ರಶ್ನಾತೀತರೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಧಾನಿಯಾದವರು ಜನರ ಪ್ರತಿನಿಧಿಯೇ ಹೊರತು ಸರ್ವಾಧಿಕಾರಿಯಲ್ಲ. ಯಡಿಯೂರಪ್ಪ ಅವರ ಪ್ರಕಾರ
ದೇಶದ ಪ್ರಧಾನಿಯಾದವರು ಮಧ್ಯಪ್ರದೇಶದ ಚುನಾವಣೆಯಲ್ಲಿ ಕರ್ನಾಟಕ ಸರ್ಕಾರದ ಬಗ್ಗೆ ಸುಳ್ಳುಆರೋಪ ಮಾಡಬಹುದೇ?
ರಾಜ್ಯ ಸರ್ಕಾರ ಎಲ್ಲದ್ದಕ್ಕೂ ಕೇಂದ್ರ ಸರ್ಕಾರದೆಡೆಗೆ ಬೊಟ್ಟು ಮಾಡುತ್ತಿಲ್ಲ ಬದಲಿಗೆ ಪರಿಹಾರ ನೀಡಿ ಎಂದು ಕೇಳುತ್ತಿದ್ದೇವೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಕೆಲಸ ಮಾಡಬೇಕು. ಕರ್ನಾಟಕ ರಾಜ್ಯದಲ್ಲಿ ಬರ ಬಂದರೆ ಕೇಂದ್ರ ಸರ್ಕಾರದ್ದು ಜವಾಬ್ದಾರಿ ಇರುತ್ತದೆ. ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ತೆರಿಗೆ ನೀಡುತ್ತದೆ ಎಂದು ತಿಳಿಸಿದ್ದಾರೆ. ಎನ್.ಡಿ.ಆರ್.ಎಫ್/ ಎಸ್.ಡಿ.ಆರ್.ಎಫ್ ಅನುದಾನವಿರುತ್ತದೆ. ಬೆಳೆ ನಷ್ಟವಾದಾಗ ಕೇಂದ್ರ ಸರ್ಕಾರದ ಜವಾಬ್ದಾರಿಯೂ ಇರುತ್ತದೆ. ರೂ.33,700 ಕೋಟಿ ಬೆಳೆ ನಷ್ಟವಾಗಿದ್ದು, 17,900 ಕೋಟಿ ರೂ.ಗಳನ್ನು ಪರಿಹಾರವಾಗಿ ಕೇಳಿದ್ದೇವೆ. ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡ ಇಲ್ಲಿಗೆ ಭೇಟಿ ನೀಡಿ ಹೋಗಿದ್ದರೂ, ಇನ್ನೂ ವರದಿ ನೀಡಿಲ್ಲ. ಅನುದಾನ ಶೀಘ್ರ್ರವಾಗಿ ನೀಡಲು ಕೋರಿದ್ದೇವೆ.
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು, ಹಿಂಗಾರು ಮಳೆಯಾದರೂ ಬರಲಿ ಎಂದು ಹಾಸನಾಂಬೆಯಲ್ಲಿ ಪ್ರಾರ್ಥಿಸಿದ್ದೇನೆ. ಜೋಳ, ರಾಗಿ, ಭತ್ತ ಪ್ರಮುಖ ಬೆಳೆಗಳು, ಮುಂಗಾರು ಮಳೆ ಬರದೇ ಬೆಳೆಗಳು ಕೈಸೇರದಂತಾಗಿದೆ. ಕಡೇಪಕ್ಷ ಹಿಂಗಾರು ಮಳೆ ಬಂದರೆ ದನಕರುಗಳಿಗೆ ಮೇವು ದೊರೆಯುತ್ತದೆ.
ರಾಜ್ಯದ ವಿದ್ಯುತ್ ಸಮಸ್ಯೆ ನಿವಾರಣೆಗೆ ಈಗಾಗಲೇ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. 800 ಮೆಗಾ ವ್ಯಾಟ್ ನಷ್ಟು ಥರ್ಮಲ್ ವಿದ್ಯುತ್ ನ್ನು ಉತ್ಪಾದಿಸಲಾಗುತ್ತಿದೆ. ರಾಜ್ಯದಲ್ಲಿ ಉತ್ಪಾದನೆಯಾಗುವ ವಿದ್ಯುತ್ ರಾಜ್ಯದ ಬಳಕೆಗೆ ಲಭ್ಯವಾಗಬೇಕು ಎಂಬ ಆದೇಶ ಹೊರಡಿಸಲಾಗಿದೆ. ಸಕ್ಕರೆ ಕಾರ್ಖಾನೆಗಳ ಪ್ರಾರಂಭದಿಂದಾಗಿ ವಿದ್ಯುತ್ ಕೋಜನರೇಷನ್ ಸಾಧ್ಯವಾಗುತ್ತಿದ್ದು, ಸುಮಾರು 450 ಮೆ.ವ್ಯಾ Siddaramaiah ವಿದ್ಯುತ್ ಉತ್ಪಾದನೆಯಾಗುತ್ತದೆ. ಈ ಎಲ್ಲ ಕ್ರಮಗಳಿಂದ ಮೂರು ಫೇಸ್ಗಳಲ್ಲಿ ಸತತ 7 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
Siddaramaiah ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಧಾನಿಯಾದವರು ಜನರ ಪ್ರತಿನಿಧಿಯೇ ಹೊರತು ಸರ್ವಾಧಿಕಾರಿಯಲ್ಲ ; ಸಿಎಂ ಸಿದ್ದರಾಮಯ್ಯ
Date: