Saturday, November 23, 2024
Saturday, November 23, 2024

Madhu Bangarappa ಸಿಮ್ಸ್ನ್ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮ : ಮಧು ಎಸ್.ಬಂಗಾರಪ್ಪ

Date:

Madhu Bangarappa ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯವನ್ನು ಮೇಲ್ದರ್ಜೆಗೇರಿಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡು ಜನಸಾಮಾನ್ಯರಿಗೆ ಅತ್ಯಂತ ಕಡಿಮೆ ದರದ ಹಾಗೂ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.

ಶಿವಮೊಗ್ಗದ ಸಿಮ್ಸ್ನ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಅಲ್ಲಿನ ಆಡಳಿತಾಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.

ಹೃದಯ, ಕಿಡ್ನಿ, ಮೆದುಳು ಮುಂತಾದ ಗಂಭೀರ ಸ್ವರೂಪದ ಕಾಯಿಲೆಗಳಿಗೆ ಜನಸಾಮಾನ್ಯರು ಖರ್ಚುಗಳಿಗೆ ಹೆದರಿ ಚಿಕಿತ್ಸೆ ತೆಗೆದುಕೊಳ್ಳದೇ ನರಳಾಡುತ್ತಿದ್ದಾರೆ. ಅಂತಹವರಿಗೆ ಸುಲಭವಾಗಿ ಚಿಕಿತ್ಸೆ ದೊರೆಯುವಂತಾಗಬೇಕು ಎಂದವರು ನುಡಿದರು.

ಸಿಮ್ಸ್ಗೆ ಅಗತ್ಯವಿರುವ ಬಹುತೇಕ ಸೌಲಭ್ಯಗಳನ್ನು ಈಗಾಗಲೇ ಒದಗಿಸಲಾಗಿದೆ. ಅಗತ್ಯವಿರುವ ಇನ್ನಷ್ಟು ಭೌತಿಕ ಕಟ್ಟಡಗಳು, ಮಾನವ ಸಂಪನ್ಮೂಲ ಸೌಲಭ್ಯಗಳ ಒದಗಿಸುವುದರ ಜೊತೆಗೆ ಇನ್ನಷ್ಟು ಅತ್ಯಾಧುನಿಕ ಯಂತ್ರಗಳನ್ನು ಅಳವಡಿಸಿ, ಜನಸಾಮಾನ್ಯರಿಗೆ ಉತ್ತಮ ದರ್ಜೆಯ ಹಾಗೂ ಗುಣಮಟ್ಟದ ಸೇವೆಗಳನ್ನು ಒದಗಿಸುವಂತೆ ಮಾಡುವ ಆಶಯ ತಮ್ಮದಾಗಿದೆ. ಆದ್ದರಿಂದ ಸಿಮ್ಸ್ನ ಆಡಳಿತಾಧಿಕಾರಿಗಳು ಅಗತ್ಯವಿರುವ ಕಟ್ಟಡಗಳು, ಮಾನವ ಸಂಪನ್ಮೂಲ ಹಾಗೂ ಯಂತ್ರಗಳನ್ನು ಕಲ್ಪಿಸಿಕೊಳ್ಳಲು ಕ್ರಿಯಾಯೋಜನೆಯನ್ನು ರೂಪಿಸಿ, ಸರ್ಕಾರಕ್ಕೆ ಸಲ್ಲಿಸುವಂತೆ ಅವರು ಸೂಚಿಸಿದರು.

ಸಿಮ್ಸ್ನಲ್ಲಿ ಚಿಕಿತ್ಸೆಗೆ ಆಗಮಿಸುವ ವಿವಿಧ ಕಾಯಿಲೆಗಳನ್ನು ಗುರುತಿಸುವ ಅನೇಕ ಯಂತ್ರಗಳು, ಪರೀಕ್ಞಾ ಲ್ಯಾಬ್‌ಗಳನ್ನು ಇನ್ನಷ್ಟು ಉನ್ನತೀಕರಿಸುವುದರ ಜೊತೆಗೆ ಸಿಬ್ಬಂಧಿಗಳನ್ನು ನಿಯೋಜಿಸಬೇಕಾದ ಅಗತ್ಯವಿದೆ ಎಂದ ಅವರು, ಕೊರೋನ ಮಾದರಿಯಲ್ಲಿಯೇ ಕೆ.ಎಫ್.ಡಿ.ಯಂತಹ ಮಾರಣಾಂತಿಕ ಕಾಯಿಲೆಗಳ ಪ್ರಾಥಮಿಕ ಸಂಶೋಧನೆಗಳು ಇಲ್ಲಿಯೇ ನಡೆಯುವಂತಾಗಬೇಕು. ಮುಂದಿನ 20 ವರ್ಷಗಳ ದೂರದೃಷ್ಠಿಯನ್ನು ಇಟ್ಟುಕೊಂಡು ಕಾರ್ಯಯೋಜನೆ ರೂಪಿಸುವಂತೆ ಅವರು ಸಲಹೆ ನೀಡಿದರರು.

ಸಿಮ್ಸ್ನಲ್ಲಿ ಗುಣಮಟ್ಟದ ಸೇವೆ ಸಿಗುವಂತೆ ಮಾಡಿದರೆ, ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಬೆಲೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಜನಸಾಮಾನ್ಯರು ಸಿಮ್ಸ್ಗೆ ಧಾವಿಸುತ್ತಾರೆ. ಇದರಿಂದಾಗಿ ಜನರಿಗೆ ಕಡಿಮೆ ದರದಲ್ಲಿ ಉತ್ತಮ ಸೇವೆ ದೊರೆಯಲಿದೆ ಹಾಗೂ ಸಿಮ್ಸ್ನ ಆದಾಯ ಮೂಲವೂ ಹೆಚ್ಚಳವಾಗಿ ನಿರ್ವಹಣೆ ಸುಲಭವಾಗಲಿದೆ. ಈ ವಿಷಯದಲ್ಲಿ ಸಿಮ್ಸ್ ಆಡಳಿತಾಧಿಕಾರಿಗಳು ಹಾಗೂ ಸಿಬ್ಬಂಧಿಗಳು ವಿಶೇಷ ಗಮನಹರಿಸಬೇಕಾದ ಅಗತ್ಯವಿದೆ ಎಂದವರು ನುಡಿದರು.

ಪ್ರಸ್ತುತ ಸಿಮ್ಸ್ನಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯಾಧಿಕಾರಿಗಳು, ಪ್ರಶಿಕ್ಷಣಾರ್ಥಿಗಳು, ಆರೋಗ್ಯ ಸಿಬ್ಬಂಧಿಗಳಿಗೆ ಇನ್ನಷ್ಟು ವಸತಿ ಗೃಹಗಳ ಅಗತ್ಯವಿದೆ. ಅದಕ್ಕಾಗಿ ಹೊಸದೊಂದು ವಸತಿ ಸಮುಚ್ಛಯ ನಿರ್ಮಿಸುವ ಅಗತ್ಯವಿದೆ. ಇನ್ನೂ ಹಲವು ವೈದ್ಯಕೀಯ ವಿಭಾಗಗಳಿಗೆ ಪ್ರತ್ಯೇಕ ಹಾಗೂ ಹೆಚ್ಚುವರಿ ಕಟ್ಟಡಗಳ ಅಗತ್ಯವಿದೆ. ಡಿ.ಗ್ರೂಪ್ ನೌಕರರ ಸೇವೆ ತುರ್ತಾಗಿ ಬೇಕಾಗಿದೆ ಎಂದು ಸಿಮ್ಸ್ ಆಡಳಿತಾಧಿಕಾರಿಗಳು ಸಭೆಯಲ್ಲಿ ಸಚಿವರ ಗಮನಸೆಳೆದರು. ಆಗ ಈ ಎಲ್ಲ ಸೌಲಭ್ಯವನ್ನು ಆದ್ಯತೆಯ ಮೇರೆಗೆ ಒದಗಿಸಲು ಕ್ರಮ ವಹಿಸುವುದಾಗಿ ಅವರು ನುಡಿದರು.

ಸರ್ಕಾರಕ್ಕೆ ವಿವಿಧ ಬೇಡಿಕೆಗಳ ಪ್ರಸ್ತಾವನೆ ಜೊತೆಗೆ ತುರ್ತು ಹಾಗೂ ತೀವ್ರ ನಿಗಾ ಘಟಕದ ಸ್ಥಾಪನೆಗೂ ಕ್ರಿಯಾಯೋಜನೆಯನ್ನು ರೂಪಿಸಿ ಸಲ್ಲಿಸುವಂತೆ ಅವರು ಸಿಮ್ಸ್ ಆಡಳಿತಾಧಿಕಾರಿಗಳಿಗೆ ಸೂಚಿಸಿದರು.

ಮೆಗಾನ್‌ನಲ್ಲಿ ದಾಖಲಾಗುವ ಸಿಬ್ಬಂಧಿಗಳ ಜೊತೆಗೆ ಆರೈಕೆಗೆಂದು ಬರುವವರಿಗಾಗಿ ಅತ್ಯಂತ ಕಡಿಮೆ ಹಾಗೂ ಸುಸಜ್ಜಿತ ವಸತಿ ಸೌಲಭ್ಯವನ್ನು ಒದಗಿಸಲು ಪ್ರತ್ಯೇಕ ಕೊಠಡಿಗಳ ಅಗತ್ಯವಿರುವುದನ್ನು ತಿಳಿದಿದ್ದು, ಅದಕ್ಕಾಗಿ ತಾತ್ಕಾಲಿಕ ವ್ಯವಸ್ಥೆ ಒದಗಿಸಲು ಹಾಗೂ ಜನರ ಅನುಕೂಲಕ್ಕಾಗಿ ಗ್ರಂಥಾಲಯ ಸೌಲಭ್ಯವನ್ನು ಕಲ್ಪಿಸಲು ಸೂಚಿಸಿರುವುದಾಗಿ ಅವರು ತಿಳಿಸಿದರು.

Madhu Bangarappa ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಸಿಮ್ಸ್ನ ನಿರ್ದೇಶಕ ಡಾ. ವಿರೂಪಾಕ್ಷಪ್ಪ, ಮೆಗ್ಗಾನ್‌ನ ಜಿಲ್ಲಾ ಅಧೀಕ್ಷಕ ತಿಮ್ಮಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ ಸೇರಿದಂತೆ ಸಿಮ್ಸ್ನ ವಿವಿಧ ವಿಭಾಗಗಳ ವೈದ್ಯಾಧಿಕಾರಿಗಳು, ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ

Maharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ...

Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ

Police Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ...

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ)...