Saturday, November 23, 2024
Saturday, November 23, 2024

Siddaramaiah ಬರ ಪರಿಹಾರದ ಬಗ್ಗೆ ರಾಜ್ಯ ಸರ್ಕಾರದ ಪತ್ರಕ್ಕೆ ಸೂಕ್ತ ಕ್ರಮವನ್ನ ಕೇಂದ್ರ ಕೈಗೊಂಡಿಲ್ಲ- ಸಿದ್ಧರಾಮಯ್ಯ

Date:

Siddaramaiah ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ X ಖಾತೆಯಲ್ಲಿ ಅನಿಸಿಕೆ ಹಂಚಿಕೊಂಡಿದ್ದಾರೆ.

ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ.
ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ.

ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ ಅನುಮತಿ ಕೋರಲಾಗಿತ್ತು. ಆದರೆ ಇನ್ನೂ ಅನುಮತಿ ನೀಡಿಲ್ಲ.
ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ‌. ರೂ.18,171 ಕೋಟಿ ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಾಸ್ ಕೊಟ್ಟರೂ ಸಾಕು ನಮ್ಮ ರೈತರ ಕಷ್ಟಕ್ಕೆ ಸಹಾಯವಾಗುತ್ತಿತ್ತು.

ಸೆಪ್ಟಂಬರ್ 21 ರಂದು ಬರಪರಿಹಾರಕ್ಕಾಗಿ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು. ಕೇಂದ್ರದ ತಂಡ ಅಕ್ಟೋಬರ್ 4 ರಿಂದ 9ರ ವರೆಗೆ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿ ನೀಡಿದೆ. ನಾವೆಲ್ಲಾ ಕೇಂದ್ರ ತಂಡವನ್ನು ಭೇಟಿ ಮಾಡಿ ಚರ್ಚಿಸಿ ಬರದ ಸ್ಥಿತಿ ವಿವರಿಸಿದ್ದೇವೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ರೂ.4,663 ಕೋಟಿ ಬೆಳೆ ನಷ್ಟ ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು. ಕೇಂದ್ರ ಸಚಿವರಿಗೂ ಮನವಿ ಮಾಡಿದ್ದೇವೆ. ಕೇಂದ್ರ ಕೃಷಿ ಮತ್ತು ಗೃಹ ಸಚಿವರನ್ನು ಖುದ್ದು ಭೇಟಿ ಮಾಡಲು ಸಮಯ ಕೊಡಿ ಎಂದು ಪತ್ರ ಬರೆದಿದ್ದೆ. ಇವತ್ತಿನವರೆಗೂ ಸಮಯ ಕೊಟ್ಟಿಲ್ಲ.

ಇವತ್ತಿನವರೆಗೂ ಕೇಂದ್ರ ಸಭೆಯನ್ನೇ ನಡೆಸಿಲ್ಲ. ಸಮಯ ಕೇಳಿದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ. ಅಧಿಕಾರಿಗಳನ್ನಾದರೂ ಭೇಟಿ ಮಾಡಿ ಎಂದು ಹೇಳಿ ನಾನು ಮೂವರು ಸಚಿವರನ್ನು ದೆಹಲಿಗೆ ತೆರಳಲು ಹೇಳಿದ್ದೆ. 3 ಜನ‌ ದೆಹಲಿಗೆ ಹೋಗಿ ಅಧಿಕಾರಿಗಳಿಗೆ ವಿವರಿಸಿದ್ದಾರೆ.
ವಿತ್ತ ಸಚಿವರನ್ನು ನಮ್ಮ ಮಂತ್ರಿಗಳು ಭೇಟಿ ಮಾಡಿದ್ದಾರೆ. ಆದರೂ ಕೇಂದ್ರ ಸರ್ಕಾರ ಇವತ್ತಿನವರೆಗೆ ಸಭೆ ನಡೆಸಿಲ್ಲ. ಪರಿಹಾರ ನೀಡುವ‌ ಪ್ರಕ್ರಿಯೆಯನ್ನೇ ಶುರು ಮಾಡಿಲ್ಲ.

ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ 6.5 ಲಕ್ಷ ರೈತರಿಗೆ ರೂ.460 ಕೋಟಿ ನಮ್ಮ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರು, ಮೇವಿಗೆ ರೂ.327 ಕೋಟಿ ಬಿಡುಗಡೆ, ರೂ.780 ಕೋಟಿ DC ಗಳ PD ಖಾತೆಯಲ್ಲಿದೆ. ಅವರೂ ತಹಶೀಲ್ದಾರ್ ಗಳಿಗೆ ಬಿಡುಗಡೆ ಮಾಡಿದ್ದಾರೆ.
ಯಾವ ತಾಲ್ಲೂಕುಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇಲ್ಲದಂತೆ ನಿರ್ವಹಿಸಿದ್ದೇವೆ.
Siddaramaiah ವಿವಿಧ ತಾಲ್ಲೂಕುಗಳ 60 ಹಳ್ಳಿಗಳಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿದ್ದೇವೆ.
ಹೊರ ರಾಜ್ಯಕ್ಕೆ ಮೇವು ಹೋಗದಂತೆ ತಡೆದಿದ್ದೇವೆ. ಮೇವಿನ‌ ಬೀಜ ವಿತರಣೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿಗಳು ಕೇಂದ್ರದ ನಿರ್ಲಕ್ಷ್ಯದ ನಡುವೆಯೂ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ

Maharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ...

Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ

Police Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ...

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ)...