Department of Health and Family Welfare ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನರಸಿ ಬರುವ ಪ್ರತಿ ರೋಗಿಗಳಿಗೂ ಅಗತ್ಯವಿರುವ ಎಲ್ಲಾ ಔಷಧಿಗಳು ಆಸ್ಪತ್ರೆಯಲ್ಲೇ ಉಚಿತವಾಗಿ ಲಭ್ಯವಾಗಬೇಕು ಎಂಬುದು ನಮ್ಮ ಸರ್ಕಾರದ ಧ್ಯೇಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿಧಾನ ಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿ ಮಾತನಾಡಿದರು..
Department of Health and Family Welfare ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಕೆ ವ್ಯವಸ್ಥೆಯಲ್ಲಿ ಸದ್ಯ ಇರುವ ಲೋಪದೋಷಗಳನ್ನು ಮುಂದಿನ ಮೂರು ತಿಂಗಳ ಒಳಗಾಗಿ ಸರಿಪಡಿಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಹಣಕಾಸು ಇಲಾಖೆಯ ಜೊತೆ ಚರ್ಚೆ ನಡೆಸಲಾಗಿದ್ದು, ಟೆಂಡರ್ ವ್ಯವಸ್ಥೆಯಲ್ಲೂ ಬದಲಾವಣೆ ಮಾಡಲಿದ್ದೇವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಲಭ್ಯತೆ ಸೇರಿದಂತೆ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಲು ನಮ್ಮ ಸರ್ಕಾರ ಕ್ರಮಗಳನ್ನು ಕೈಗೊಂಡಿದೆ ಎಂದರು.