Dr. Selvamani R ಶಿವಮೊಗ್ಗದ ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ “ಹಿರಿಯ ವಿದ್ಯಾರ್ಥಿಗಳ ಮಿಲನ” ಮತ್ತು “13ನೇ ಬ್ಯಾಚ್ ವತಿಯಿಂದ ಬೆಳ್ಳಿಹಬ್ಬ ಸಂಭ್ರಮ” ನಡೆಯಿತು.
ಸಮಾರಂಭದ ಮುಖ್ಯ ಅತಿಥಿಗಳಾದ, ಡಾ. ಆರ್.ಸೆಲ್ವಮಣಿ ಅವರು ಮಾತನಾಡಿ – “ನವೋದಯ ಶಾಲೆಗಳು, ಗ್ರಾಮೀಣ ಭಾಗದ ವಿದ್ಯರ‍್ಥಿಗಳನ್ನು ಆರಿಸಿ, ಅವರಲ್ಲಿ ಅಡಗಿದ್ದ ಸುಪ್ತ ಪ್ರತಿಭೆ ಗಳನ್ನು ಗುರುತಿಸಿ, ಒಳ್ಳೆಯ ಸಂಸ್ಕೃತಿ ಕಲಿಸಿ, ದೇಶಕ್ಕೆ ಉತ್ತಮ ನಾಗರಿಕರನ್ನಾಗಿಸುವ ಒಂದು ಅತ್ಯುತ್ತಮ ಸಂಸ್ಥೆಯಾಗಿ ಬೆಳೆದಿದೆ. ಈ ರೀತಿಯ ಕರ‍್ಯಕ್ರಮಗಳು ನವೋದಯ ಶಾಲೆಯ 12ನೇ ತರಗತಿಯ ವಿದ್ಯರ‍್ಥಿಗಳಿಗೆ ಒಂದು ಸ್ಪರ‍್ತಿ..ಇದರಿಂದ ಮುಂದಿನ ದಿನಗಳಲ್ಲಿ ಯಾವ ಕ್ಷೇತ್ರ ಆರಿಸಿಕೊಂಡರೆ ತಮಗೆ ಉತ್ತಮ ಭವಿಷ್ಯ ಇದೆ ಎಂಬ ಕಲ್ಪನೆ ಬರಲಿದೆ” ಎಂದರು.
ಡಾ.ನಾಗರಾಜ್ ಪರಿಸರ ಅವರು ಮಕ್ಕಳನ್ನು ಉದ್ದೇಶಿಸಿ “ಮಾನವ ಮತ್ತು ಪರಿಸರ ಒಂದು ಅವಿನಾಭವ ಸಂಬಂಧ ಹೊಂದಿದ್ದು, ಈ ನಿಟ್ಟಿನಲ್ಲಿ ಪರಿಸರವನ್ನು ಪೋಷಿಸಿ ಬೆಳಸುವ ಗುಣ ಮಕ್ಕಳಲ್ಲಿ ಬೆಳೆಯಬೇಕು..ಗಾಜನೂರಿನ ನವೋದಯ ಶಾಲೆ ಪ್ರಕೃತಿಯ ಮಡಿಲಲ್ಲಿ ಇದ್ದು, ಇಲ್ಲಿನ ಮಕ್ಕಳು ಗಿಡಗಳನ್ನು ಬೆಳೆಸಿ, ಪರಿಸರವನ್ನು ಸ್ವಚ್ಛವಾಗಿ ಇಟ್ಟು, ಮುಂದಿನ ಪೀಳಿಗೆಗೆ ಮಾದರಿ ಆಗಲಿ” ಎಂದು ಹರಸಿದರು.
Dr. Selvamani R ಈ ಬೆಳ್ಳಿ ಹಬ್ಬದ ಕಾರ್ಯಕ್ರಮದಲ್ಲಿ ಜವಾಹಾರ್ ನವೋದಯ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಾದ- ಶ್ರೀಯುತ ರವಿ, ಉಪ ಪ್ರಾಂಶುಪಾಲರಾದ ಶ್ರೀ. ಜಾನ್ಸನ್ ಪಿ ಜೇಮ್ಸ್ ಮುಂತಾದವರು ಉಪಸ್ಥಿತರಿದ್ದರು.