ಪೌಷ್ಠಿಕಾಂಶವುಳ್ಳ ಆರೋಗ್ಯ ಸೇವನೆ ಹಾಗೂ ಉತ್ತಮ ಜೀವನಶೈಲಿ ರೂಢಿಸಿಕೊಳ್ಳಬೇಕು. ಪ್ರತಿಯೊಬ್ಬರಿಗೂ ಆರೋಗ್ಯ ಜಾಗೃತಿ ಅವಶ್ಯಕ ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾಧ್ಯಕ್ಷ ಎಸ್.ಪಿ.ದಿನೇಶ್ ಹೇಳಿದರು.
Acharya Tulsi National College of Commerce ನ ಐಕ್ಯೂಎಸಿ, ಜಿಲ್ಲಾ ರೆಡ್‌ಕ್ರಾಸ್, ಯುವ ರೆಡ್‌ಕ್ರಾಸ್, ಎನ್‌ಎಸ್‌ಎಸ್, ಎನ್‌ಸಿಸಿ, ರೋವರ್, ರೇಂಜರ‍್ಸ್ ವಿಭಾಗ, ಸ್ಪಂದನ ಮಹಿಳಾ ಸಬಲೀಕರಣ ವತಿಯಿಂದ ಆಯೋಜಿಸಿದ್ದ “ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಆರೋಗ್ಯ” ಅಪೌಷ್ಠಿಕತೆ ಹಾಗೂ ಮಾನಸಿಕ ಖಿನ್ನತೆ ವಿಷಯ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೈಹಿಕ ಆರೋಗ್ಯಕ್ಕೆ ಹಾನಿಯುಂಟು ಮಾಡುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬಾರದು. ಅಪೌಷ್ಠಿಕ ಆಹಾರ ಹೆಚ್ಚು ಸೇವಿಸಿದಾಗ ದೈಹಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಅನೇಕ ಕಾಯಿಲೆಗಳಿಗೆ ತುತ್ತಾಗಬೇಕಾಗುತ್ತದೆ. ಆದ್ದರಿಂದ ಆರೋಗ್ಯ ಕಾಳಜಿ ಮುಖ್ಯ ಎಂದು ತಿಳಿಸಿದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಿ.ಎಂ.ರೇಖಾ ಮಾತನಾಡಿ, ಇಂದಿನ ಯುವತಿಯರು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಸಮಯ ವ್ಯಯಿಸುವ ಮೂಲಕ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಒಳ್ಳೆಯ ಕಾರ್ಯಗಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ಮಾಡಿಕೊಳ್ಳಬೇಕು. ವಿದ್ಯಾರ್ಥಿನಿಯರು ಜಾಗೃತರಾಗಿರಬೇಕು ಎಂದು ಹೇಳಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಸದೃಢ ಆರೋಗ್ಯ ಕಾಪಾಡಿಕೊಳ್ಳುವುದರಿಂದ ಧನಾತ್ಮಕ ಆಲೋಚನೆ ನಮ್ಮಲ್ಲಿ ಹೆಚ್ಚು ಬರುತ್ತವೆ. ಉತ್ತಮ ಬದುಕು ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಉತ್ತಮ ಆರೋಗ್ಯ ಪದ್ಧತಿ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಟಿಎನ್‌ಸಿಸಿ ಪ್ರಾಚಾರ್ಯೆ ಮಮತಾ ಪಿ.ಆರ್. ಮಾತನಾಡಿ, ಕಾಲೇಜಿನ ವತಿಯಿಂದ ನಿರಂತರವಾಗಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಹಾಗೂ ಆರೋಗ್ಯ ಕಾಳಜಿ ಕುರಿತು ವಿಶೇಷ ಮಾರ್ಗದರ್ಶನ, ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
Acharya Tulsi National College of Commerce ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಲಾಯಿತು. ಐಕ್ಯೂಎಸಿ ಸಂಚಾಲಕ ಪ್ರೊ. ಜಗದೀಶ್.ಎಸ್., ಕಾರ್ಯಕ್ರಮ ಸಂಚಾಲಕ ಪ್ರೊ. ಕೆ.ಎಂ.ನಾಗರಾಜು, ಕಾರ್ಯಕ್ರಮಾಧಿಕಾರಿ ಪ್ರೊ. ಎನ್.ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.