Ram Mandir ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪೂರ್ವಭಾವಿ ಧಾರ್ಮಿಕ ವಿಧಿ ವಿಧಾನಗಳು ನಿನ್ನೆಯಿಂದಲೇ (ಜ.16) ಆರಂಭವಾಗಿದೆ.
ಜನವರಿ 21 ರವರೆಗೆ ಈ ವಿಧಿ ವಿಧಾನಗಳು ನಡೆಯಲಿದೆ. 22ರಂದು ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು, 23 ರಿಂದ ರಾಮಲಲ್ಲಾನ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಚಂಪತ್ ರಾಯ್ ಅವರು ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಾಣ ಪ್ರತಿಷ್ಠಾಪನೆಯ ವಿವರಗಳನ್ನು ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ.
Ram Mandir ವಾರಣಾಸಿಯ ಗಣೇಶ್ವರ ಶಾಸ್ತ್ರಿ ದ್ರಾವಿಡ ಅವರ ಮೇಲ್ವಿಚಾರಣೆ, ಸಮನ್ವಯತೆ, ಮಾರ್ಗದರ್ಶನದಲ್ಲಿ 121 ಆಚಾರ್ಯರು ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿಕೊಡಲಿದ್ದಾರೆ ಎಂದು ತಿಳಿಸಿದ್ದಾರೆ.