Ram Mandir ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಎರಡನೇ ದಿನವೇ ಭಕ್ತ ಸಾಗರವೇ ರಾಮನ ದರ್ಶನ ಪಡೆಯಲು ಬಂದಿದ್ದಾರೆ. ಮುಂಜಾನೆ ಮೂರು ಗಂಟೆಯಿಂದಲೇ ರಾಮನ ದರ್ಶನಕ್ಕೆ ಭಾರಿ ಸಂಖ್ಯೆಯ ಭಕ್ತರು ಜಮಾಯಿಸಿದ್ದರು.
ಮುಂಜಾನೆಯಿಂದಲೇ ಬ್ಯಾರಿಕೇಡ್ ಗಳನ್ನು ದಾಟಿ ಆವರಣದೊಳಗೆ ಏಕಕಾಲಕ್ಕೆ ಜನರು ಪ್ರವೇಶಿಸಿದ್ದರಿಂದ ನೂಕು ನುಗ್ಗಲು ಉಂಟಾಯಿತು. ಈ ಜನರನ್ನ ತಡೆಯಲು ಪೊಲೀಸರು ಹರಸಾಹಸವೇ ಪಡಬೇಕಾಯಿತು.
Ram Mandir ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಲ್ಲಿ ವೈಭವಾನಿಕ ಸಮೀಕ್ಷೆ ಕೈಗೊಂಡು ಪರಿಸ್ಥಿತಿ ಪರಿಶೀಲಿಸಿದರು. ಹೆಚ್ಚುವರಿ ಭದ್ರತೆಗೆ ಸೂಚನೆ ನೀಡಿದರು.
ರಾಮಪಥದಲ್ಲಿ ಸುಮಾರು 13 ಕಿಲೋ ಮೀಟರ್ ದೂರದಿಂದಲೇ ಜನದಟ್ಟಣೆ ಕಂಡುಬಂದಿತು. ಜನರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುವ ಸಾಧ್ಯತೆ ಇರುವುದು ಕಂಡುಬರುತ್ತದೆ. ಆದ್ದರಿಂದ ಅಯೋಧ್ಯೆಯ ರಾಮನ ದರ್ಶನಕ್ಕೆ ಆತುರ ಬೇಡ. ದರ್ಶನಕ್ಕೆ ಮುಂದಿನ ದಿನಗಳಲ್ಲಿ ಆಗಮಿಸುವಂತೆ ಉತ್ತರ ಪ್ರದೇಶ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಜನರಿಗೆ ಮನವಿ ಮಾಡಿದ್ದಾರೆ.