Saturday, November 23, 2024
Saturday, November 23, 2024

Congress Karnataka ಬಸವಣ್ಣನವರನ್ನ ರಾಜ್ಯದ ಸಾಂಸ್ಕೃತಿಕ ನಾಯಕ ರನ್ನಾಗಿ ಘೋಷಿಸಿದ್ದಕ್ಕೆ ಅಭಿನಂದನೆ

Date:

Congress Karnataka ಈ ನಾಡು ಕಂಡ ಶ್ರೇಷ್ಠ ವಚನಕಾರರಾದ ಬಸವಣ್ಣ ಅವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ಎಂದು ಮಹತ್ವದ ಘೋಷಣೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಚೇತನ್ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಬಸವಣ್ಣ ಅವರು ಜಾತಿಭೇದವಿಲ್ಲದ, ವರ್ಗ ತಾರತಮ್ಯವಿಲ್ಲದ, ಲಿಂಗ ತಾರತಮ್ಯವಿಲ್ಲದ ಸಮಾಜವನ್ನು ರೂಪಿಸುವ ಕೆಲಸ ಮಾಡಿದ್ದರು. ಇಂತಹ ವ್ಯಕ್ತಿಯನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಕಾಂಗ್ರೆಸ್ ಪಕ್ಷ ತಾನು ನಂಬಿರುವ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಇನ್ನಷ್ಟು ಗಟ್ಟಿಗೊಳಿಸಿದೆ ಎಂದು ಚೇತನ್ ಅಭಿಪ್ರಾಯಪಟ್ಟಿದ್ದಾರೆ.

ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅವಕಾಶಗಳು ಸಿಗಬೇಕು ಎಂದು ಬಸವಣ್ಣ ಬಯಸಿದ್ದರು. ಕಾಂಗ್ರೆಸ್ ಸರ್ಕಾರದ ಯೋಜನೆಗಳತ್ತ ಕಣ್ಣು ಹಾಯಿಸಿದರೆ ಬಸವಣ್ಣನ ಆಶಯಗಳ ಪ್ರಭಾವ ಪ್ರತಿ ಯೋಜನೆಯಲ್ಲಿಯೂ ಕಾಣಬಹುದು. ಬಡತನ ನಿವಾರಣೆ, ಕೃಷಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ಮಹಿಳಾ ಸಬಲೀಕರಣ, ಉದ್ಯೋಗ ಸೃಷ್ಟಿಗೆ ನಮ್ಮ ಸರ್ಕಾರ ಆದ್ಯತೆ ನೀಡಿ ಅಭಿವೃದ್ಧಿಯ ಜೊತೆಯಲ್ಲಿ ಸಾಮಾಜಿಕ ನ್ಯಾಯವನ್ನು ಬೆಸೆಯುವ ಕೆಲಸ ಮಾಡುತ್ತಿದೆ ಎಂದು ಚೇತನ್ ತಿಳಿಸಿದ್ದಾರೆ.

Congress Karnataka ಅದರಂತೆ ಕನ್ನಡದ ನೆಲದಲ್ಲಿ ಅನುಭವ ಮಂಟಪದ ಮೂಲಕ ಆದ ವೈಚಾರಿಕ ಮತ್ತು ಸಾಮಾಜಿಕ ಕ್ರಾಂತಿ ಇವತ್ತಿಗೂ ಒಂದು ಆದರ್ಶದಂತೆ, ಸಾಧ್ಯತೆಯಂತೆ ಕಾಣಿಸುತ್ತದೆ. ಇದಕ್ಕೆ ಕಾರಣರಾದವರು ಅಲ್ಲಮಫ್ರಭು. ಇಂತಹ ವ್ಯಕ್ತಿಯ ಹೆಸರನ್ನು ಶಿವಮೊಗ್ಗ ಫ್ರೀಡಂ ಪಾರ್ಕ್ಗೆ ನಾಮಕರಣ ಮಾಡಲು ಶ್ರಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೂ ಚೇತನ್ ಅಭಿನಂದನೆ ಸಲ್ಲಿಸಿದ್ದಾರೆ.

12ನೇ ಶತಮಾನದಲ್ಲಿ ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಫ್ರಭು ಅವರ ಹೆಸರನ್ನು ಶಿವಮೊಗ್ಗ ಫ್ರೀಡಂ ಪಾರ್ಕ್ಗೆ ಇಡಬೇಕು ಎಂಬುದು ಜನತೆಯ ಒತ್ತಾಸೆಯಾಗಿತ್ತು. 46.32 ಎಕರೆ ವಿಸ್ತೀರ್ಣದ ಜೈಲು ಆವರಣದ ಈ ಮೈದಾನಕ್ಕೆ ಅಲ್ಲಮಪ್ರಭು ಹೆಸರು ಮಾಡುವ ದಶಕಗಳ ಕನಸು ಸಾಕಾರಗೊಂಡಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ

Maharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ...

Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ

Police Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ...

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ)...