Imran Khan ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣೆ ಫಲಿತಾಂಶ ಪ್ರಕಟವಾಗಿ ಅತಂತ್ರ ಸ್ಥಿತಿ ಉಂಟಾಗಿದೆ. ಈ ಹಿನ್ನಲೆ ಯಲ್ಲಿ ಅನೇಕ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಪಾಕ್ ಮಾಜಿ ಪ್ರಧಾನಿ ಜಾಮೀನು ಪಡೆದಿದ್ದಾರೆ.
Imran Khan ಮೇ 9ರ ಗಲಭೆಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಸಚಿವ ಶಾ ಮಹಮದ್ ಕುರೇಶಿಗೆ ಜಾಮೀನು ದೊರೆತಿದೆ. 2023ರ ಮೇ ತಿಂಗಳಿನಲ್ಲಿ ಸೇನಾ ನೆಲೆಗಳ ಮೇಲಿನ ದಾಳಿಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯ ವು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ವಿದೇಶಾಂಗ ಸಚಿವ ಶಾಹ್ ಕುರೇಶಿಗೆ ಶಿಕ್ಷೆ ವಿಧಿಸಿತ್ತು. ಆದರೆ ಈಗ ಉಭಯ ನಾಯಕರಿಗೆ ಜಾಮೀನು ಮಂಜೂರಾಗಿದೆ.