Social media ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯನಿರತರಾಗಿರುವ ಕಂಟೆಂಟ್ ಕ್ರಿಯೇಟರ್ಸ್‌ಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.
ಅದೇನಂದರೆ, ಕಂಟೆಂಟ್ ಕ್ರಿಯೇಟರ್ಸ್‌ಗೆ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಹೊಸ ಯುಗದ ಪ್ರಭಾವಿಗಳು ಮತ್ತು ಕಂಟೆಂಟ್ ಕ್ರಿಯೇಟರ್ಸ್ ಗಳನ್ನು ಗುರುತಿಸಲು ಕೇಂದ್ರ ಸರ್ಕಾರವು ನ್ಯಾಷನಲ್ ಕ್ರಿಯೇಟರ್ಸ್ ಪ್ರಶಸ್ತಿ ನೀಡಲು ಯೋಜನೆ ರೂಪಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Social media ದೇಶದ ಮೃದು ಶಕ್ತಿ ಮತ್ತು ಸಂಸ್ಕೃತಿಯನ್ನು ಅಂತರಾಷ್ಟ್ರೀಯವಾಗಿ ಹರಡಲು ಸಹಾಯ ಮಾಡಿದವರಿಗೆ ಒಂದು ವಿಭಾಗದಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಇತರ ವಿಭಾಗಗಳು “ಗ್ರೀನ್ ಚಾಂಪಿಯನ್ಸ್”, “ಸ್ವಚ್ಛತಾ ರಾಯಭಾರಿಗಳು”, “ಕೃಷಿ ಸೃಷ್ಟಿಕರ್ತರು” ಮತ್ತು “ಟೆಕ್ ಕ್ರಿಯೇಟರ್ಸ್” ವಿಭಾಗಗಳಲ್ಲೂ ಪ್ರಶಸ್ತಿ ನೀಡಲು ಯೋಜಿಸಲಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ವಿವರಿಸಲಾಗಿದೆ.