Veerashaiva Lingayat ಇತ್ತೀಚಿಗಷ್ಟೇ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ಈಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿದ್ದು, ಈ ಹಿಂದಿನ ನೇಮಕ ಆದೇಶವನ್ನು ಹಿಂದಕ್ಕೆ ಪಡೆಯಲಾಗಿದೆ.
ವಿಜಯಾನಂದ ಕಾಶಪ್ಪನವರ್ ಅವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿರುವುದನ್ನು ರದ್ದುಗೊಳಿಸಿ, ಮಾನ್ಯ ಶಾಸಕರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿ, ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
Veerashaiva Lingayat ಕಳೆದ ಜನವರಿ 27ರಂದು ರಾಜ್ಯ ಸರ್ಕಾರ, 35 ಶಾಸಕರನ್ನು ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಅದರಲ್ಲಿ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿತ್ತು. ಆದರೆ ಕ್ರೀಡಾ ಪ್ರಾಧಿಕಾರದ ಬೈಲಾದಲ್ಲಿ ಇದಕ್ಕೆ ಅವಕಾಶವಿಲ್ಲ. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಬೈಲಾದ ನಿಯಮದ ಪ್ರಕಾರ ಸಚಿವರೇ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗುತ್ತಾರೆ. ಅಂದರೆ ಈಗ ಕ್ರೀಡಾ ಸಚಿವರಾಗಿರುವ ನಾಗೇಂದ್ರ ಅವರೇ ಅಧ್ಯಕ್ಷರು. ಬೇಕಿದ್ದರೆ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಬಹುದು.
ಇದನ್ನು ಅರ್ಥ ಮಾಡಿಕೊಂಡ ರಾಜ್ಯ ಸರ್ಕಾರ, ವಿಜಯಾನಂದ ಕಾಶಪ್ಪನವರ್ ಅವರನ್ನು ಈಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿದೆ.