Siddaramaiah ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರು ಕಲಾಜಗತ್ತಿಗೆ ಸಲ್ಲಿಸಿರುವ ಅನನ್ಯ ಸೇವೆಯನ್ನು ಗುರುತಿಸಿ “15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ”ದ “ಜೀವಮಾನ ಸಾಧನೆ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ.
ಅವರ ನಿರ್ದೇಶನದ ಹಿಂದಿ ಚಿತ್ರ ಗರಂ ಹವಾ ಹಲವಾರು ರಾಷ್ಟ್ರೀಯ – ಅಂತಾರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದರೆ, ಕನ್ನಡದ ‘ಬರ’ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದಿತ್ತು.
ಕಲಾ ನಿರ್ದೇಶಕರಾಗಿ ಅವರು ನಿರ್ದೇಶಿಸಿದ ಮೊದಲ ಚಲನಚಿತ್ರವಾದ ಹಕೀಕತ್ ‘ಫಿಲ್ಮ್ ಫೇರ್ ಪ್ರಶಸ್ತಿ’ಯನ್ನು ಪಡೆದಿತ್ತು. ದಾರಾಶೀಕೋ ನಾಟಕವು ಆಧುನಿಕ ಉತ್ಕೃಷ್ಟ ನಾಟಕವೆಂದು ಗುರುತಿಸಲ್ಪಟ್ಟಿದ್ದು ಅವರ ಇನ್ನೊಂದು ಸಾಧನೆಯಾಗಿದೆ.
Siddaramaiah ಹೀಗೆ ನಮ್ಮೂರಿನಲ್ಲಿ ಹುಟ್ಟಿದ ಮೇರು ಸಾಧಕ, ಹಿರಿಯ ರಂಗಕರ್ಮಿಯೊಬ್ಬರು ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ಅತ್ಯಂತ ಖುಷಿಯ ವಿಚಾರ. ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.