Board examination ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5,8, ಹಾಗೂ ಒಂಬತ್ತನೇ ತರಗತಿ ಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ.
ಪರೀಕ್ಷೆ ರದ್ದುಗೊಳಿಸಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನೆ ಸರ್ಕಾರ ಸಲ್ಲಿಸಿದ ಮೇಲ್ಮನವಿ ವಿಚಾರ ನಡೆಸಿ ತೀರ್ಪು ಕಾಯ್ದೆರಿಸಿದ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್ ಹಾಗೂ ಕೆ ರಾಜೇಶ್ ರೈ ನೇತೃತ್ವದ ವಿಭಾಗಿಯ ಪೀಠ ಈ ತೀರ್ಪನ್ನು ಪ್ರಕಟಿಸಿದೆ.
Board examination ಏಕ ಸದಸ್ಯ ಪೀಠದ ಆದೇಶವನ್ನು ರದ್ದುಗೊಳಿಸಿರುವ ನ್ಯಾಯಾಲಯ ಮುಂದಿನ ವರ್ಷ ಪರೀಕ್ಷೆಗು ಮುನ್ನ ಸಂಬಂಧಿಸಿ ದರೊಡನೆ ಸಮಾಲೋಚನೆ ನಡೆಸಬೇಕು ಎಂದು ಶಿಕ್ಷಣ ಇಲಾಖೆ ತಾಕೀತು ಮಾಡಿದೆ. ಆದೇಶದ ವಿಕೃತ ಪ್ರತಿ ಇನ್ನೂ ಲಭ್ಯವಾಗಿಲ್ಲ. ಈ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಸ್ಥಗಿತಗೊಳಿಸಲಾಗಿದ್ದ, ಐದು, ಎಂಟು ಹಾಗೂ ಒಂಬತ್ತನೇ ತರಗತಿಗಳ ಮೌಲ್ಯಾಂಕನ ಪರೀಕ್ಷೆಗಳು ಅಭಾದಿತವಾಗಿ ಮುಂದುವರೆಯಲಿದೆ.