Monday, November 25, 2024
Monday, November 25, 2024

Lok Sabha Elections ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಗಳಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ, ಕಾಂಗ್ರೆಸ್ ಗೆ ಪ್ರತಿದಾಳ ಉರುಳಿಸಿದ ಎನ್.ಡಿ. ಎ.

Date:

Lok Sabha Elections ಲೋಕಸಭೆ ಚುನಾವಣೆ 2024 ಕಣ ದಿನಕಳದಂತೆ ರಂಗೇರಿದ್ದು, ರಾಜಕೀಯ ಪಕ್ಷಗಳ ಏಟು-ಎದಿರೇಟು ಪ್ರಹಸನ ಎಗ್ಗಿಲ್ಲದೇ ನಡೆಯುತ್ತಿದೆ.
ಇದಕ್ಕೆ ಇಂಬು ನೀಡುವಂತೆ ಸಿಎಂ ಸಿದ್ದರಾಮಯ್ಯ ಪ್ರಯೋಗಿಸಿದ್ದ ಒಕ್ಕಲಿಗ ಅಸ್ತ್ರಕ್ಕೆ ತಿರುಗೇಟು ನೀಡಿರುವ ಬಿಜೆಪಿ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಎನ್ ಡಿಎ ಒಕ್ಕೂಟ ತನ್ನ ಎಲ್ಲ ಕರ್ನಾಟಕದ ಅಭ್ಯರ್ಥಿಗಳನ್ನು ಒಕ್ಕಲಿಗ ಒಕ್ಕಲಿಗ ಮಠಾಧೀಶರಾದ ಆದಿಚುಂಚನಗಿರಿ ಶ್ರೀಗಳನ್ನು ಭೇಟಿ ಮಾಡಿಸುವ ಮೂಲಕ ಪ್ರತಿದಾಳ ಉರುಳಿಸಿದೆ.
NDA ಅಭ್ಯರ್ಥಿಗಳಿಂದ ನಿರ್ಮಲಾನಂದ ಶ್ರೀಗಳ ಭೇಟಿ
ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ವಿಚಲಿತ: ಆದಿ ಚುಂಚನಗಿರಿ ಮಠಕ್ಕೆ ಸಿಎಂ ಭೇಟಿ; ಕಾಂಗ್ರೆಸ್ ನಾಯಕರಿಂದ ಒಕ್ಕಲಿಗ ಮಂತ್ರ ಜಪ.
ಮೊನ್ನೆ ಮೊನ್ನೆಯಷ್ಟೇ ಮೈಸೂರಿನಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಒಕ್ಕಲಿಗ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್​ ತಪ್ಪಿಸಿ ಅರಸು ಮನೆತನಕ್ಕೆ ಟಿಕೆಟ್​ ಕೊಟ್ಟಿದ್ದಾರೆ. ನಾವು ಒಕ್ಕಲಿಗರಾದ ಎಂ.ಲಕ್ಷ್ಮಣ್​ಗೆ ಟಿಕೆಟ್​ ಕೊಟ್ಟಿದ್ದೇವೆ ಎಂದಿದ್ದರು. ಇದೇ Lok Sabha Elections ದಾಳಕ್ಕೆ ಪ್ರತಿಯಾಗಿ ಇದೀಗ ಬಿಜೆಪಿ ಕೂಡ ಪ್ರತಿದಾಳ ಉರುಳಿಸಿದೆ. ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಮೈತ್ರಿ ಒಕ್ಕಲಿಗ ನಾಯಕರು ಭೇಟಿ ನೀಡುವ ಮೂಲಕ ಒಗ್ಗಟ್ಟು-ಶಕ್ತಿ ಪ್ರದರ್ಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ನವೆಂಬರ್ 27. ಎಂ.ಆರ್.ಎಸ್. ನಲ್ಲಿ ತ್ರೈಮಾಸಿಕ ನಿರ್ವಹಣೆ. ಶಿವಮೊಗ್ಗದ ಬಹುಪಾಲು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ...

Constitution Day ನವೆಂಬರ್ 26.”ಸಂವಿಧಾನ ದಿನ” .ಫ್ರೀಡಂ ಪಾರ್ಕಿನಲ್ಲಿ ವಿಶೇಷ ಕಾರ್ಯಕ್ರಮ

Constitution Day ನ. 26 ರಂದು 'ಸಂವಿಧಾನ ದಿನಾಚರಣೆ' ಪ್ರಯುಕ್ತ ಭಾರತ...

Shivamogga police ವಿಷ ಸೇವಿಸಿ ಮೃತಪಟ್ಟ ಅಪರಿಚಿತ ವ್ಯಕ್ತಿ.ಪೊಲೀಸ್ ಪ್ರಕಟಣೆ

Shivamogga police ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರ್ಕಾರಿ ಬಸ್ ನಿಲ್ದಾಣದ...