Saturday, November 23, 2024
Saturday, November 23, 2024

SVEEP Shivamogga ಮತದಾನ ಜಾಗೃತಿಗೆ ಸ್ವೀಪ್ ಕಪ್ ಕ್ರಿಕೆಟ್ ಒಂದು ವಿಭಿನ್ನ ಚಟುವಟಿಕೆ-ಸ್ನೇಹಲ್ ಸುಧಾಕರ್ ಲೋಖಂಡೆ

Date:

SVEEP Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸ್ವೀಪ್ ವತಿಯಿಂದ ಹಲವಾರು ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದ್ದು, ‘ಸ್ವೀಪ್ ಕಪ್’ ವಿಭಿನ್ನವಾದ ಪ್ರಯತ್ನವಾಗಿದೆ. ಎಲ್ಲ ಕ್ರೀಡಾಪಟುಗಳು ಸ್ಮರ್ಧಾತ್ಮಕವಾಗಿ ಪಾಲ್ಗೊಳ್ಳುವ ಮೂಲಕ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದರು .

ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಏ.27 ರಂದು ನಗರದ ಎನ್‍ಇಎಸ್ ಮೈದಾನದಲ್ಲಿ ವಿವಿಧ ಇಲಾಖೆಗಳ ತಂಡಗಳಿಗೆ ಆಯೋಜಿಸಲಾಗಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ-‘ಸ್ವೀಪ್ ಕಪ್ ನ್ನು’ ಉದ್ಘಾಟಿಸಿ ಅವರು ಮಾತನಾಡಿದರು.

ಮತದಾನ ಜಾಗೃತಿಗಾಗಿ ಜಿಲ್ಲೆಯಲ್ಲಿ ವಾಕಥಾನ್, ಜಾಥಾಗಳು, ರ್ಯಾಲಿಗಳು, ವಿವಿಧ ಸಾಂಸ್ಕøತಿಕ ಚಟುವಟಿಕೆಗಳು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಕ್ರೀಡಾ ಮನೋಭಾವದ ಮೂಲಕ ಜಾಗೃತಿ ಮೂಡಿಸುವ ಸ್ವೀಪ್ ಕಪ್ ಒಂದು ವಿಭಿನ್ನ ಚಟುವಟಿಕೆಯಾಗಿದ್ದು ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡು ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯಲ್ಲಿ ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಶೇ.100 ಮತದಾನ ಆಗಬೇಕು ಎಂದರು.

SVEEP Shivamogga ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಮಾತನಾಡಿ, ಮತದಾನ ಜಾಗೃತಿ ಕುರಿತು ಜಿಲ್ಲೆಯಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದು ಅದರಲ್ಲಿ ಸ್ವೀಪ್ ಕಪ್ ಕೂಡ ಒಂದಾಗಿದೆ. ಸ್ಪರ್ಧಾಳುಗಳೆಲ್ಲ ಸ್ಪರ್ಧಾ ಮನೋಭಾವದಿಂದ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಮತದಾನ ಕುರಿತು ಜಾಗೃತಿ ಮೂಡಿಸಬೇಕು. ಎಲ್ಲ ಮತದಾರರು ಮತದಾನ ಮಾಡುವ ಮೂಲಕ ಜಿಲ್ಲೆಯು ಮಾದರಿಯಾಗಬೇಕೆಂದು ಆಶಿಸಿದರು.

ಮಹಾನಗರಪಾಲಿಕೆ ಆಯುಕ್ತರಾದ ಮಾಯಣ್ಣಗೌಡ ಮಾತನಾಡಿ, ಮತದಾನ ಜಾಗೃತಿ ಕುರಿತು ಸ್ವೀಪ್ ವತಿಯಿಂದ ವಿಶಿಷ್ಟ, ವಿಭಿನ್ನ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದ್ದು, ಮೇ 7 ರಂದು ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ಸದೃಢ ಪ್ರಜಾಪ್ರಭುತ್ವಕ್ಕಾಗಿ ನಾವೆಲ್ಲರೂ ಮತದಾನ ಮಾಡಬೇಕು. ಎಂದರು.

‘ಎ’ ವಿಭಾಗದಲ್ಲಿ ಗ್ರಾಮೀಣಾಭಿವೃದಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ನಡುವೆ, ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಡುವೆ ಪಂದ್ಯಾವಳಿ ನಡೆಯವುದು.

‘ಬಿ’ವಿಭಾಗದಲ್ಲಿ ಮಹಾನಗರಪಾಲಿಕೆ ಮತ್ತು ಅರಣ್ಯ ಇಲಾಖೆ, ಮಂಗಳೂರು ವಿದ್ಯುಚ್ಚಕ್ತಿ ನಿಗಮ ಮತ್ತು ಪೊಲೀಸ್ ಇಲಾಖೆ ಹಾಗೂ ರಾಜ್ಯ ಲೆಕ್ಕಪತ್ರ ಇಲಾಖೆ ಹಾಗೂ ಕೆಎಸ್‍ಆರ್‍ಪಿ ನಡುವೆ ಪಂದ್ಯಾವಳಿ ನಡೆಯುವುದು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಪಟು ಅದಿತಿ, ಕೆಎಸ್‍ಆರ್‍ಪಿ ಕಮಾಂಡೆಂಟ್ ಯುವಕುಮಾರ್, ಜಿ.ಪಂ ಯೋಜನಾ ನಿರ್ದೇಶಕ ರಂಗಸ್ವಾಮಿ, ಜಿ.ಪಂ ಸಿಪಿಓ ಗಾಯತ್ರಿ, ವಾರ್ತಾಧಿಕಾರಿ ರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹ್ಮದ್ ಪರ್ವೇಜ್ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ

Maharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ...

Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ

Police Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ...

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ)...