Prajwal Revanna ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಸೋರಿಕೆ ಮಾಡಿ ಮಹಿಳೆಯವರ ಗೌರವ ಹಾಳು ಮಾಡಿರುವ ಪಿತೂರಿಯಲ್ಲಿ ಡಿ.ಸಿ.ಎಂ ಡಿ.ಕೆ. ಶಿವಕುಮಾರ್ ಭಾಗಿಯಾಗಿದ್ದು, ರಾಜ್ಯ ಸರ್ಕಾರದ ಮರ್ಜಿಯಲ್ಲಿರುವ ಎಸ್ ಐ ಟಿ ಯಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ತೀರ್ಥಹಳ್ಳಿ ತಾಲ್ಲೂಕು ಜೆ.ಡಿ.ಎಸ್ ದೂರಿದೆ.
ತೀರ್ಥಹಳ್ಳಿಯಲ್ಲಿ ಜೆಡಿಎಸ್ ಮುಖಂಡರು,ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಿ ಪ್ರಕರಣವನ್ನು ಸಿ.ಬಿ.ಐ ಗೆ ತನಿಖೆಗೆ ಶಿಫಾರಸ್ಸು ಮಾಡಬೇಕು ಹಾಗೂ ಮಾಜಿ ಪ್ರಧಾನಿ ಜೆ.ಡಿ.ಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಮತ್ತು ಮಾಜಿ ಮುಖ್ಯಮಂತ್ರಿ ಮತ್ತು ರಾಜ್ಯ ಜೆ.ಡಿ.ಎಸ್ ಅಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹೆಸರನ್ನು ಕಾಂಗ್ರೇಸ್ 2024ರ ಲೋಕಸಭೆ ಚುನಾವಣೆಗೆ ಪೆನ್‌ಡ್ರೈವ್ ಪ್ರಕರಣ ಬಳಸಿ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರಿಂದ ಜೆ.ಡಿ.ಎಸ್ ಅಭಿಮಾನಿಗಳಿಗೆ ನೋವು ಉಂಟು ಮಾಡಿದೆ.
ಕೂಡಲೇ ಪೆನ್‌ಡ್ರೈವ್ ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಿ ಶಿಕ್ಷೆ ಕೊಡಿಸುವ ಆದೇಶ ಆಗಬೇಕು ಎಂದು ಆಗ್ರಹಿಸಿದರು.
Prajwal Revanna ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಹಂಚಿರುವುದರ ಹಿಂದೆ ಡಿ.ಸಿ.ಎಮ್ ಡಿ.ಕೆ. ಶಿವಕುಮಾರ್ ಪಿತೂರಿ ಇರುವುದು ದೇವರಾಜೇ ಗೌಡ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಸಂಭಾಷಣೆಯ ಆಡಿಯೋದಲ್ಲಿ ಬಹಿರಂಗವಾಗಿದೆ.
ಇಂತಹ ಸ್ಥಿತಿಯಲ್ಲಿ ರಾಜ್ಯ ಸರ್ಕಾರದ ನೇರ ನಿಯಂತ್ರಣ ಮತ್ತು ಉಸ್ತುವಾರಿಯಲ್ಲಿ ನಡೆಯುತ್ತಿರುವ ಎಸ್.ಐ.ಟಿ, ತನಿಖೆಯಿಂದ ಸತ್ಯಾಂಶ ಹೊರಬರುವುದಿಲ್ಲ ಎಂದರು.