International Youth Day ಅಂತರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಹೆಚ್.ವೈ.ವಿ/ಏಡ್ಸ್ ಕುರಿತು ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯ ತಡೆಗಟ್ಟುವುದು, ಹೆಚ್ಐವಿ/ಏಡ್ಸ್(ತಡೆ) ಕಾಯ್ದೆ 2017, ನ್ಯಾಕೋ ಏಡ್ಸ್ ಆ್ಯಪ್, ಉಚಿತ ರಾಷ್ಟ್ರೀಯ ಸಹಾಯವಾಣಿ 1097, ಎಸ್ಟಿಐ ಇತ್ಯಾದಿ ಬಗ್ಗೆ ಅರಿವು ಮೂಡಿಸಲು ಮ್ಯಾರಥಾನ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ವಿದ್ಯಾರ್ಥಿಗಳಲ್ಲಿ ಹೆಚ್ಐವಿ/ಏಡ್ಸ್ ಮತ್ತು ರಕ್ತದಾನ ಮಹತ್ವವನ್ನು ತಿಳಿಸುವ ಉದ್ದೇಶದಿಮದ ಜಿಲ್ಲೆಯ ರೆಡ್ ರಿಬ್ಬನ್ ಕ್ಲಬ್(ಆರ್ಆರ್ಸಿ) ಹೊಂದಿರುವ ಕಾಲೇಜುಗಳ ಎನ್ಎಸ್ಎಸ್ ಅಧಿಕಾರಿಗಳ ಸಹಯೋಗದೊಂದಿಗೆ ಆ.16 ರ ಬೆಳಿಗ್ಗೆ 7 ಗಂಟೆಗೆ ಮ್ಯಾರಥಾನ್ ಸ್ಪರ್ಧೆ ಏರ್ಪಡಿಸಲಾಗಿದೆ.
ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾ ಕಾರ್ಯಕ್ರಮಾಧಿಕಾರಿಗಳ ಉಪಸ್ಥಿತಿಯಲ್ಲಿ ಮ್ಯಾರಥಾನ್ ನಡೆಯಲಿದೆ.
International Youth Day ಮ್ಯಾರಥಾನ್ ಮಾರ್ಗ: ನೆಹರು ಕ್ರೀಡಾಂಗಣದಿಂದ ಪ್ರಾರಂಭವಾಗಿ ಜೈಲ್ ಸರ್ಕಲ್, ಗೋಪಿ ಸರ್ಕಲ್, ಅಮೀರ್ ಅಹ್ಮದ್ ಸರ್ಕಲ್ನಿಂದ ಮುಂದುವರೆದು ವೀರಭದ್ರೇಶ್ವರ ಟಾಕೀಸ್ ಮುಖಾಂತರ ನೆಹರು ಕ್ರೀಡಾಂಗಣದಲ್ಲಿ ಕೊನೆಗೊಳ್ಳುವುದು ಎಂದು ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಕಾರ್ಯಕ್ರಮಾಧಿಕಾರಿ ಡಾ.ದಿನೇಶ್ ತಿಳಿಸಿದ್ದಾರೆ.