Saturday, November 23, 2024
Saturday, November 23, 2024

Agumbe Ghat News ಆಗುಂಬೆ ಸುರಂಗ ಮಾರ್ಗ ! ಆಗಲಿದೆಯೆ? ಈ ಮಾಹಿತಿ ಓದಿ

Date:

Agumbe Ghat News ಮಲ್ಪೆ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ-169 ಎ ಚತುಷ್ಪಥ ಯೋಜನೆಯಲ್ಲಿ, ಆಗುಂಬೆ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣದ ಕಾರ್ಯ ಸಾಧ್ಯತೆಯ ಕುರಿತಂತೆ ವರದಿ ಸಲ್ಲಿಸಲು, ಕೇಂದ್ರ ಭೂ ಸಾರಿಗೆ ಸಚಿವಾಲಯದ ಡೈರೆಕ್ಟರ್ ಜನರಲ್ ಧರ್ಮೇಂದ್ರ ಸಾರಂಗಿ ಅವರು, ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಈ ಕುರಿತಂತೆ ಅವರು ಸೆ. 28 ರಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಧರ್ಮೇಂದ್ರ ಸಾರಂಗಿ ಅವರು, ಸೆ. 27 ರಂದು ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪರಿಶೀಲನೆಗೆ ಆಗಮಿಸಿದ್ದರು. ಈ ವೇಳೆ ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಅವರನ್ನು ಭೇಟಿಯಾಗಿ ಚರ್ಚಿಸಲಾಯಿತು’ ಎಂದು ಸಂಸದರು ತಿಳಿಸಿದ್ದಾರೆ.
ಆಗುಂಬೆ ಘಾಟ್ ರಸ್ತೆಗೆ ಪರ್ಯಾಯವಾಗಿ, ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ 4 ಪಥದ ಸುರಂಗ ಮಾರ್ಗದ ರಸ್ತೆ ನಿರ್ಮಾಣ ಮಾಡಲು ಡಿಪಿಆರ್ ಸಿದ್ದಪಡಿಸಲು ಅನುಮತಿ ನೀಡಲಾಗಿದೆ. ಈ ಸಂಬಂಧ ಯೋಜನೆ ಅನುಷ್ಠಾನದ ಸಾಧ್ಯಾಸಾಧ್ಯತೆಗಳ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಸಂಸದರು ಹೇಳಿದ್ದಾರೆ.
ಚರ್ಚೆ :
Agumbe Ghat News ಸಿಗಂದೂರು ಸೇತುವೆ ಶಿವಮೊಗ್ಗ – ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ಸಾಗರ ನಗರದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಕುರಿತಂತೆ ಚರ್ಚೆ ನಡೆಸಲಾಯಿತು.
ಹಾಗೆಯೇ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ, ಶಿವಮೊಗ್ಗ – ಆನಂದಪುರ ನಡುವೆ ನಾಲ್ಕು ಪಥದ ರಸ್ತೆ ನಿರ್ಮಾಣ, ನೆಲ್ಲಿಸರದಿಂದ ತೀರ್ಥಹಳ್ಳಿವರೆಗಿನ ಚತುಷ್ಪಥ ಮಾರ್ಗ, ಬೈಂದೂರು – ನಾಗೋಡಿವರೆಗಿನ ದ್ವಿಪಥ ಮಾರ್ಗ, ಹೊಸೂರು ಹಾಗೂ ತಾಳಗುಪ್ಪ ರೈಲ್ವೆ ಮೇಲ್ಸೇತುವೆ ಕಾಮಗಾರಿಗಳ ಬಗ್ಗೆ ಭೂ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಯಿತು ಎಂದು ಸಂಸದರು ತಿಳಿಸಿದ್ಧಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಕುವೆಂಪು ವಿವಿಯಲ್ಲಿ 2024-25 ನೇ ಸಾಲಿನಲ್ಲಿ ಖಾಲಿಯಿರುವ ಪಿಜಿ/ಡಿಪ್ಲೊಮಾ/ಸರ್ಟಿಫಿಕೇಟ್ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯವು 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ/...

Dinesh Gundurao ಜಿಲ್ಲೆಯಲ್ಲಿನ ಮಂಗನ ಕಾಯಿಲೆ ಪೀಡಿತ ಪ್ರದೇಶಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಭೇಟಿ

Dinesh Gundurao ಗುಂಡುರಾವ್‌ರವರು ನ.26 ಮತ್ತು 27 ರಂದು ಜಿಲ್ಲೆಯಲ್ಲಿ ಪ್ರವಾಸ...